ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ಅವಿನಾಶ್

Updated on: Mar 13, 2025 | 9:44 PM

ನಟ ಅವಿನಾಶ್​ ಅವರು ಪುನೀತ್ ರಾಜ್​ಕುಮಾರ್​ ಜೊತೆ ‘ಅಪ್ಪು’ ಸಿನಿಮಾದಿಂದ ‘ಜೇಮ್ಸ್​’ ಚಿತ್ರದ ತನಕ ಅಭಿನಯಿಸಿದ್ದಾರೆ. ಈಗ ‘ಅಪ್ಪು’ ಚಿತ್ರ ರೀ-ರಿಲೀಸ್ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಅವಿನಾಶ್ ಅವರು ಪುನೀತ್ ರಾಜ್​ಕುಮಾರ್​ ಜೊತೆಗಿನ ನೆನಪುಗಳನ್ನು ಮೆಲುಕು ಹಾಕಿದ್ದಾರೆ. ಅವರು ಮಾತನಾಡಿದ ಸ್ಪೆಷಲ್ ವಿಡಿಯೋ ಇಲ್ಲಿದೆ.

‘ಪವರ್​ ಸ್ಟಾರ್​’ ಪುನೀತ್ ರಾಜ್​ಕುಮಾರ್​ (Puneeth Rajkumar) ಅಭಿನಯದ ‘ಅಪ್ಪು’ ಸಿನಿಮಾ ಮಾರ್ಚ್​ 14ರಂದು ಮರು ಬಿಡುಗಡೆ ಆಗುತ್ತಿದೆ. ರಾಜ್ಯಾದ್ಯಂತ ಅದ್ದೂರಿಯಾಗಿ ಪ್ರದರ್ಶನ ಕಾಣಲಿದೆ. ಈ ಸಿನಿಮಾದಲ್ಲಿ ಪೊಲೀಸ್ ಪಾತ್ರ ಮಾಡಿದ ಅವಿನಾಶ್ ಅವರು ಆ ದಿನಗಳ ನೆನಪನ್ನು ಹಂಚಿಕೊಂಡಿದ್ದಾರೆ. ‘ಅಪ್ಪು’ (Appu) ಚಿತ್ರದಲ್ಲಿ ಅವಿನಾಶ್ ಅವರು ಪುನೀತ್ ಕೆನ್ನೆಗೆ ಬಾರಿಸುವ ದೃಶ್ಯ ಇದೆ. ಅಂದಿನ ಶೂಟಿಂಗ್ ಅನುಭವವನ್ನು ಈಗ ಅವಿನಾಶ್ ಅವರು ನೆನಪಿಸಿಕೊಂಡಿದ್ದಾರೆ. ಪುನೀತ್ ಅವರ ಫೈಟ್​ ನೋಡಿ ತಾವು ದಂಗಾಗಿದ್ದಾಗಿ ಅವಿನಾಶ್ (Avinash) ತಿಳಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More