ದರ್ಶನ್ ನಟನೆಯ ‘ಡೆವಿಲ್’ ಸಿನಿಮಾ ಕಥೆ ಊಹೆ ಮಾಡಲೂ ಸಾಧ್ಯವಿಲ್ಲ: ಚಂದು ಗೌಡ

Updated By: ಮದನ್​ ಕುಮಾರ್​

Updated on: May 08, 2025 | 8:48 PM

ನಟ ದರ್ಶನ್ ಅಭಿನಯದ ‘ಡೆವಿಲ್’ ಚಿತ್ರದ ಶೂಟಿಂಗ್ ನಡೆಯುತ್ತಿದೆ. ಈ ಸಿನಿಮಾದಲ್ಲಿ ನಟ ಚಂದು ಗೌಡ ಅವರು ವಿಲನ್ ಪಾತ್ರ ಮಾಡುತ್ತಿದ್ದಾರೆ. ಟಿವಿ9 ಜತೆ ಮಾತನಾಡಿರುವ ಚಂದು ಗೌಡ ಕೆಲವು ಇಂಟರೆಸ್ಟಿಂಗ್ ವಿಷಯಗಳನ್ನು ಹಂಚಿಕೊಂಡಿದ್ದಾರೆ. ‘ಡೆವಿಲ್’ ಚಿತ್ರದ ಕಥೆ ಹೇಗಿದೆ ಎಂಬುದನ್ನು ಅವರು ತಿಳಿಸಿದ್ದಾರೆ.

‘ಚಾಲೆಂಜಿಂಗ್ ಸ್ಟಾರ್’ ದರ್ಶನ್ ನಟನೆಯ ‘ಡೆವಿಲ್’ (Devil The Hero) ಸಿನಿಮಾ ಶೂಟಿಂಗ್ ನಡೆಯುತ್ತಿದೆ. ಈ ಚಿತ್ರದಲ್ಲಿ ನಟ ಚಂದು ಗೌಡ ಅವರು ವಿಲನ್ ಆಗಿ ನಟಿಸುತ್ತಿದ್ದಾರೆ. ಟಿವಿ9 ಜೊತೆ ಮಾತನಾಡಿರುವ ಅವರು ಕೆಲವು ಇಂಟರೆಸ್ಟಿಂಗ್ ವಿಷಯಗಳನ್ನು ಹಂಚಿಕೊಂಡಿದ್ದಾರೆ. ‘ಡೆವಿಲ್’ ಸಿನಿಮಾದ ಕಥೆ ಹೇಗಿದೆ ಎಂಬುದನ್ನು ಅವರು ತಿಳಿಸಿದ್ದಾರೆ. ‘ಕಥೆ ತುಂಬ ಡಿಫರೆಂಟ್ ಆಗಿದೆ. ಕಥೆ ಕೇಳಿದಾಗ ಹಿಂಗೂ ಒಂದು ಸಿನಿಮಾ ಮಾಡಬಹುದಾ ಅಂತ ನನಗೆ ಅನಿಸಿತು. ಜೀವನದಲ್ಲಿ ಒಮ್ಮೆ ಮಾತ್ರ ಸಿಗುವಂತಹ ಅವಕಾಶ ಇದು. ದರ್ಶನ್ (Darshan) ಅವರಿಗೆ ಇದು ದೊಡ್ಡ ಹಿಟ್ ಆಗಲಿದೆ. ಕಥೆಯನ್ನು ಊಹಿಸಲು ಕೂಡ ಸಾಧ್ಯವಿಲ್ಲ’ ಎಂದು ಚಂದು ಗೌಡ (Chandu Gowda) ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.