ನಟ ಶಿವರಾಜ್ಕುಮಾರ್ ಆರೋಗ್ಯ ವಿಚಾರಿಸಿ ಆಸ್ಪತ್ರೆಯಿಂದ ಹೊರಟ ಸ್ನೇಹಿತ ಚಿ. ಗುರುದತ್
ಸೋಮವಾರ ಸಂಜೆಯೇ ಶಿವರಾಜ್ಕುಮಾರ್ ಅವರು ಆಸ್ಪತ್ರೆಯಿಂದ ಮನೆಗೆ ಮರಳುತ್ತಾರೆ ಎಂದು ಊಹಿಸಲಾಗಿತ್ತು. ಸದ್ಯದ ಮಾಹಿತಿ ಪ್ರಕಾರ, ಮಂಗಳವಾರ (ಏ.2) ಬೆಳಗ್ಗೆ ಅವರು ಡಿಸ್ಚಾರ್ಜ್ ಆಗಲಿದ್ದಾರೆ. ಇಂದು ಅವರ ಆಪ್ತರು ಆಸ್ಪತ್ರೆಗೆ ಬಂದು ಆರೋಗ್ಯ ವಿಚಾರಿಸಿದ್ದಾರೆ. ಶಿವರಾಜ್ಕುಮಾರ್ ಅವರ ಸ್ನೇಹಿತ ಚಿ. ಗುರುದತ್ ಕೂಡ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.
ಅನಾರೋಗ್ಯದ ಕಾರಣದಿಂದ ನಟ ಶಿವರಾಜ್ಕುಮಾರ್ (Shivarajkumar) ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಂಗಳೂರಿನ ವಿಠಲ್ ಮಲ್ಯ ರಸ್ತೆಯಲ್ಲಿ ಇರುವ ಖಾಸಗಿ ಆಸ್ಪತ್ರೆಯಲ್ಲಿ ಶಿವರಾಜ್ಕುಮಾರ್ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಗಂಭೀರ ಸಮಸ್ಯೆ ಏನೂ ಇಲ್ಲ ಎಂದು ಹೇಳಲಾಗುತ್ತಿದೆ. ಜನರಲ್ ಚೆಕಪ್ ಸಲುವಾಗಿ ಶಿವಣ್ಣ ಅವರು ಆಸ್ಪತ್ರೆಗೆ ದಾಖಲಾಗಿದ್ದು, ಇಂದು (ಏಪ್ರಿಲ್ 1) ಸಂಜೆ ಮನೆಗೆ ಮರಳುತ್ತಾರೆ ಎಂದು ಊಹಿಸಲಾಗಿತ್ತು. ಆದರೆ ಸದ್ಯದ ಮಾಹಿತಿ ಪ್ರಕಾರ ಮಂಗಳವಾರ (ಏಪ್ರಿಲ್ 2) ಬೆಳಗ್ಗೆ ಅವರು ಡಿಸ್ಚಾರ್ಜ್ ಆಗಲಿದ್ದಾರೆ. ಇಂದು ಆಸ್ಪತ್ರೆಗೆ ಭೇಟಿ ನೀಡಿ ಅವರು ಆಪ್ತರು ಆರೋಗ್ಯ ವಿಚಾರಿಸಿದ್ದಾರೆ. ಶಿವರಾಜ್ಕುಮಾರ್ ಅವರ ಸ್ನೇಹಿತ ಚಿ. ಗುರುದತ್ (Chi Gurudutt) ಅವರು ಆಸ್ಪತ್ರೆಗೆ ಬಂದು ಆರೋಗ್ಯ ವಿಚಾರಿಸಿ ತೆರಳಿದ್ದಾರೆ. ಅದಕ್ಕೂ ಮುನ್ನ ಮಧು ಬಂಗಾರಪ್ಪ ಕೂಡ ಆಸ್ಪತ್ರೆಗೆ ಬಂದಿದ್ದರು. ಕಳೆದ ಒಂದಷ್ಟು ದಿನಗಳಿಂದ ಗೀತಾ ಶಿವರಾಜ್ಕುಮಾರ್ ಪರವಾಗಿ ಚುನಾವಣಾ ಪ್ರಚಾರದಲ್ಲಿ ಶಿವಣ್ಣ ಭಾಗಿ ಆಗಿದ್ದರು. ಬಿಡುವಿಲ್ಲದೇ ಪ್ರಚಾರ ಮಾಡಿದ್ದರಿಂದ ಅವರು ಸ್ವಲ್ಪ ದಣಿದಿರಬಹುದು. ಗೀತಾ ಶಿವರಾಜ್ಕುಮಾರ್ (Geetha Shivarajkumar) ಅವರು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.