ಬೆಂಗಳೂರು: ಪವರ್ಸ್ಟಾರ್ ಪುನೀತ್ ರಾಜ್ಕುಮಾರ್(46) ವಿಧಿವಶ ಹಿನ್ನೆಲೆ ಕಂಠೀರವ ಸ್ಟೇಡಿಯಂನಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಲಕ್ಷಾಂತರ ಸಂಖ್ಯೆಯಲ್ಲಿ ಅಭಿಮಾನಿಗಳು ಅಂತಿಮ ದರ್ಶನ ಪಡೆಯುತ್ತಿದ್ದಾರೆ. ಈ ವೇಳೆ ನಟ, ನೃತ್ಯ ನಿರ್ದೇಶಕ ಪ್ರಭುದೇವ ಕನ್ನಡದಲ್ಲಿ ಮಾತನಾಡಿದ್ದು ಪುನೀತ್ ಅಗಲಿಕೆಗೆ ಸಂತಾಪ ಸೂಚಿಸಿದ್ದಾರೆ.