ಜೈಲಿನಲ್ಲಿ ದರ್ಶನ್​ನ​ ಅಪ್ಪಿ ಕಣ್ಣೀರು ಹಾಕಿದ ತಾಯಿ ಮೀನಾ

ಜೈಲಿನಲ್ಲಿ ದರ್ಶನ್​ನ​ ಅಪ್ಪಿ ಕಣ್ಣೀರು ಹಾಕಿದ ತಾಯಿ ಮೀನಾ

ರಾಜೇಶ್ ದುಗ್ಗುಮನೆ
|

Updated on: Jul 02, 2024 | 8:02 AM

ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ದರ್ಶನ್, ಪವಿತ್ರಾ, ವಿನಯ್ ಮೊದಲಾದವರು ಅರೆಸ್ಟ್ ಆಗಿದ್ದಾರೆ. ದರ್ಶನ್ ಅವರು ಬೆಂಗಳೂರಿನ ಕೇಂದ್ರ ಕಾರಾಗೃಹದಲ್ಲಿ ಇದ್ದಾರೆ. ಅವರನ್ನು ನೋಡಲು ಜುಲೈ 1ರಂದು ಕುಟುಂಬದವರು ತೆರಳಿದ್ದರು. ಈ ವೇಳೆ ಅವರು ಕಣ್ಣೀರು ಹಾಕಿದ್ದಾರೆ ಎಂದು ವರದಿ ಆಗಿದೆ.

ನಟ ದರ್ಶನ್ ಅವರು ಕಳೆದ ಕೆಲವು ದಿನಗಳಿಂದ ಜೈಲಿನಲ್ಲಿದ್ದಾರೆ. ಕೇಂದ್ರ ಕಾರಾಗೃಹದಲ್ಲಿ ಅವರು ಉಳಿದುಕೊಂಡಿದ್ದಾರೆ. ಅವರನ್ನು ನೋಡಲು ಜುಲೈ 1ರಂದು ತಾಯಿ ಮೀನಾ ಹಾಗೂ ಸಹೋದರ ದಿನಕರ್ ತೂಗುದೀಪ ಅವರು ಆಗಮಿಸಿದ್ದರು. ಈ ವೇಳೆ ದರ್ಶನ್ ಅವರನ್ನು ನೋಡುತ್ತಿದ್ದಂತೆ ಮೀನಾ ಕಣ್ಣೀರು ಹಾಕಿದ್ದಾರೆ. ಇಬ್ಬರೂ ಅಪ್ಪಿಕೊಂಡು ಗಳಗಳನೆ ಅತ್ತಿದ್ದಾರೆ ಎಂದು ವರದಿ ಆಗಿದೆ. ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ದರ್ಶನ್ ಅವರು ಜೈಲು ಸೇರಿದ್ದಾರೆ. ಈ ಪ್ರಕರಣದಲ್ಲಿ ಅವರು ಎ2 ಆರೋಪಿ ಆಗಿದ್ದಾರೆ. ಪವಿತ್ರಾ ಗೌಡ ಎ1 ಆರೋಪಿ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.