AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್ ಎಂದ ದರ್ಶನ್; ನಾನೇನು ಮಾಡೋಕೆ ಆಗಲ್ಲ ಎಂದ ಡಿಜಿಪಿ 

ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್ ಎಂದ ದರ್ಶನ್; ನಾನೇನು ಮಾಡೋಕೆ ಆಗಲ್ಲ ಎಂದ ಡಿಜಿಪಿ 

ವಿಕಾಸ್​ ಬಿಎಂ
| Edited By: |

Updated on: Aug 17, 2026 | 11:32 AM

Share

ಮುಖ್ಯಾಂಶಗಳು

  • ಜೈಲಿನಲ್ಲಿ ನಟ ದರ್ಶನ್‌ಗೆ ಸೊಳ್ಳೆ ಕಾಟದ ಕಿರಿಕಿರಿ
  • ಡಿಜಿಪಿ ಅಲೋಕ್ ಕುಮಾರ್ ಬಳಿ ಸೌಲಭ್ಯಕ್ಕಾಗಿ ದರ್ಶನ್ ಮನವಿ
  • ಸೊಳ್ಳೆ ವಿಚಾರದಲ್ಲಿ ನಾನೇನು ಮಾಡಲಾಗಲ್ಲ ಎಂದ ಜೈಲು ಡಿಜಿಪಿ

ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಸೊಳ್ಳೆಗಳ ಕಾಟ ವಿಪರೀತವಾಗಿದೆ. ಜೈಲಿಗೆ ಭೇಟಿ ನೀಡಿದ್ದ ಡಿಜಿಪಿ ಅಲೋಕ್ ಕುಮಾರ್ ಅವರಲ್ಲಿ ದರ್ಶನ್ ಸೊಳ್ಳೆ ಕಾಟಕ್ಕೆ ಪರಿಹಾರ ಕೋರಿದ್ದಾರೆ. ಆದರೆ, ಜೈಲು ಮ್ಯಾನ್ಯುವಲ್ ಹೊರತಾಗಿ ಯಾವುದೇ ಹೆಚ್ಚುವರಿ ಸೌಲಭ್ಯ ನೀಡಲು ಸಾಧ್ಯವಿಲ್ಲ ಎಂದು ಅಲೋಕ್ ಕುಮಾರ್ ಸ್ಪಷ್ಟವಾಗಿ ಉತ್ತರಿಸಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಲ್ಲಿರುವ ನಟ ದರ್ಶನ್‌ಗೆ ಸೊಳ್ಳೆಗಳ ಕಾಟ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ಜೈಲಿನಲ್ಲಿ ಸೊಳ್ಳೆಗಳ ಕಾಟ ಹೆಚ್ಚಾಗಿದ್ದು, ಅದರಿಂದ ಮುಕ್ತಿ ನೀಡುವಂತೆ ದರ್ಶನ್ ಜೈಲು ಅಧಿಕಾರಿಗಳ ಬಳಿ ಮನವಿ ಮಾಡಿಕೊಂಡಿದ್ದಾರೆ.

ಇತ್ತೀಚೆಗೆ ರಾಜ್ಯ ಜೈಲುಗಳ ಮಹಾನಿರ್ದೇಶಕರಾದ (ಡಿಜಿಪಿ) ಅಲೋಕ್ ಕುಮಾರ್ ಅವರು ಪರಪ್ಪನ ಅಗ್ರಹಾರ ಜೈಲಿಗೆ ಪರಿಶೀಲನೆಗಾಗಿ ಭೇಟಿ ನೀಡಿದ್ದರು. ಈ ವೇಳೆ ನಟ ದರ್ಶನ್, ‘ಜೈಲಿನಲ್ಲಿ ಸೊಳ್ಳೆಗಳ ಕಾಟ ವಿಪರೀತವಾಗಿದೆ. ನಿದ್ದೆ ಮಾಡಲು ಸಾಧ್ಯವಾಗುತ್ತಿಲ್ಲ, ಇದಕ್ಕೆ ಏನಾದರೂ ಪರಿಹಾರ ಮಾಡಿ’ ಎಂದು ಅವರಿಗೆ ಮನವಿ ಮಾಡಿದ್ದಾರೆ.

ಆದರೆ ದರ್ಶನ್ ಅವರ ಈ ಮನವಿಗೆ ಡಿಜಿಪಿ ಅಲೋಕ್ ಕುಮಾರ್ ಖಡಕ್ ಆಗಿಯೇ ಪ್ರತಿಕ್ರಿಯಿಸಿದ್ದಾರೆ. ‘ಸೊಳ್ಳೆಗಳ ವಿಷಯದಲ್ಲಿ ನಾನೇನು ಮಾಡಲು ಸಾಧ್ಯವಿಲ್ಲ. ಜೈಲಿನ ಮ್ಯಾನ್ಯುವಲ್ ಪ್ರಕಾರ ಬಂದಿಗಳಿಗೆ ಏನೆಲ್ಲಾ ಸೌಲಭ್ಯ ಒದಗಿಸಬೇಕೋ ಅದನ್ನು ಮಾತ್ರ ಕೊಡಲು ಸಾಧ್ಯ. ಮ್ಯಾನ್ಯುವಲ್‌ನಲ್ಲಿ ಇಲ್ಲದಿರುವುದನ್ನು ನೀಡಲು ಬರುವುದಿಲ್ಲ. ಜೈಲು ನಿಯಮಾವಳಿ ಪ್ರಕಾರ ಏನಾದರೂ ಸಮಸ್ಯೆಗಳಿದ್ದರೆ ಹೇಳಿ, ಸೌಲಭ್ಯ ಒದಗಿಸುತ್ತೇವೆ. ಅದನ್ನು ಹೊರತುಪಡಿಸಿ ಸೊಳ್ಳೆಗಳ ಬಗ್ಗೆ ನಾವೇನು ಮಾಡಲು ಆಗುವುದಿಲ್ಲ’ ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ವಿಕಾಸ್​ ಬಿಎಂ
ವಿಕಾಸ್​ ಬಿಎಂ

ವಿಕಾಸ್​ ಬಿಎಂ ಅವರು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯಲ್ಲಿ. ಮೈಸೂರು ಯೂನಿವರ್ಸಿಟಿ ಯಲ್ಲಿ ಶಿಕ್ಷಣ ಮುಗಿಸಿ, 2014 ರಿಂದ ಎಲೆಕ್ಟ್ರಾನಿಕ್ ಮಾದ್ಯಮದಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ಸದ್ಯ ಬೆಂಗಳೂರು ಕ್ರೈಂ ವರದಿಗಾರನಾಗಿ 11 ವರ್ಷ ಸೇವೆ ಸಲ್ಲಿಸಿದ್ದಾರೆ. ಕ್ರೈಂ ರಿಪೋರ್ಟಿಂಗ್ ಹಾಗು ಇನ್ವೆಷ್ಟಿಗೇಟಿವ್ ವರದಿಗಾರರಾಗಿ ಹಾಗು ಸ್ಟಿಂಗ್ ಆಪರೇಷನ್​ಗಳನ್ನ ಮಾಡಿದ್ದಾರೆ. ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣದ ಸುದ್ದಿ ಮೊದಲು ಬ್ರೇಕ್ ಮಾಡಿದ್ದಲ್ಲದೆ, ಶಂಕಿತರ ಸಿಸಿ ಕ್ಯಾಮರಾ ವಿಡಿಯೋಗಳನ್ನ ಪ್ರಸರಣ ಮಾಡಿ ಸಂಸ್ಥೆಯಿಂದ ಪ್ರಶಂಸೆಗೆ ಪಾತ್ರನಾಗಿದ್ದಾರೆ. ಅಲ್ಲದೇ ಬೆಂಗಳೂರಲ್ಲಿ ಟೈಡಾಲ್ ಡ್ರಗ್ ಸೇವನೆಯ ಸ್ಟಿಂಗ್ ಆಪರೇಷನ್ ಮಾಡಿ, ಮೆಡಿಕಲ್ ಗಳಲ್ಲಿ ಟೈಡಾಲ್ ಮಾತ್ರೆಯ ಮಾರಟ ನಿಯಂತ್ರಣಕ್ಕೆ ಬರುವಂತೆ ಮಾಡಿದ್ದಾರೆ. ನೊಂದವರ ಪರವಾಗಿ ನಿಂತು ವಸ್ತುನಿಷ್ಠವಾಗಿ ಸುದ್ದಿಗಳನ್ನ ನೀಡಿ ನ್ಯಾಯ ಕೊಡಿಸುವುದು ಇವರ ಮೊದಲ ಉದ್ದೇಶ. ಸದ್ಯ ಟಿವಿ9 ಸಂಸ್ಥೆಯಲ್ಲಿ ಬೆಂಗಳೂರು ಕ್ರೈಂ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ರೋಡ್ ಟ್ರಿಪ್, ಕ್ರಿಕೆಟ್‌, ವಾಲಿಬಾಲ್ ಆಡುವುದು, ಕ್ರೈಂ ಇನ್ವೆಷ್ಟಿಗೇಷನ್ ಪುಸ್ತಕ ಓದುವುದು ಮತ್ತು ಕ್ರೈಂ ತ್ರಿಲ್ಲರ್ ಸಿನಿಮಾಗಳನ್ನ ನೋಡುವುದು ಇವರ ಹವ್ಯಾಸಗಳು.

Read More