ಸಖತ್ ಆಗಿ ಡ್ಯಾನ್ಸ್ ಮಾಡಿದ ನಟ ದರ್ಶನ್; ವಿಡಿಯೋ ವೈರಲ್
ಖಾಸಗಿ ಕಾರ್ಯಕ್ರಮ ಒಂದರಲ್ಲಿ ದರ್ಶನ್ ಪರಭಾಷೆಯ ಹಾಡಿಗೆ ಮಸ್ತ್ ಆಗಿ ಹೆಜ್ಜೆ ಹಾಕಿದ್ದಾರೆ. ಈ ವಿಡಿಯೋ ಸಖತ್ ವೈರಲ್ ಆಗಿದೆ. ಈ ಬಗ್ಗೆ ಪರ-ವಿರೋಧದ ಚರ್ಚೆ ನಡೆಯುತ್ತಿದೆ. ದರ್ಶನ್ ಅವರು ಪರಭಾಷೆಯ ಹಾಡಿಗೆ ಡ್ಯಾನ್ಸ್ ಮಾಡಿದ್ದು ಏಕೆ ಎಂದು ಕೆಲವರು ಪ್ರಶ್ನೆ ಮಾಡಿದ್ದಾರೆ.
ನಟ ದರ್ಶನ್ ಅವರು ಇತ್ತೀಚೆಗೆ ಸಖತ್ ಸುದ್ದಿಯಲ್ಲಿದ್ದಾರೆ. ಅವರ ಹೊಸ ಸಿನಿಮಾ ‘ಡೆವಿಲ್’ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ. ಈಗ ಅವರು ವೈಯಕ್ತಿಕ ವಿಚಾರಕ್ಕೆ ಸುದ್ದಿ ಆಗಿದ್ದಾರೆ. ಖಾಸಗಿ ಕಾರ್ಯಕ್ರಮ ಒಂದರಲ್ಲಿ ಪರಭಾಷೆಯ ಹಾಡಿಗೆ ಮಸ್ತ್ ಆಗಿ ಹೆಜ್ಜೆ ಹಾಕಿದ್ದಾರೆ ಅವರು. ಈ ವಿಡಿಯೋ ಸಖತ್ ವೈರಲ್ ಆಗಿದೆ. ಈ ಬಗ್ಗೆ ಪರ-ವಿರೋಧದ ಚರ್ಚೆ ನಡೆಯುತ್ತಿದೆ. ದರ್ಶನ್ ಅವರು ಪರಭಾಷೆಯ ಹಾಡಿಗೆ ಡ್ಯಾನ್ಸ್ ಮಾಡಿದ್ದು ಏಕೆ ಎಂದು ಕೆಲವರು ಪ್ರಶ್ನೆ ಮಾಡಿದ್ದಾರೆ. ಇನ್ನೂ ಕೆಲವರು ‘ದರ್ಶನ್ (Darshan) ಅವರು ಏನೇ ಮಾಡಿದರೂ ತಪ್ಪು. ವೇದಿಕೆಯಲ್ಲಿ ಹಾಕಿದ್ದ ಸಾಂಗ್ ಡ್ಯಾನ್ಸ್ ಮಾಡಿದ್ದಾರೆ ಅಷ್ಟೇ’ ಎಂದಿದ್ದಾರೆ. ಕಳೆದ ವರ್ಷಾಂತ್ಯಕ್ಕೆ ಅವರ ನಟನೆಯ ‘ರಾಬರ್ಟ್’ ಸಿನಿಮಾ ರಿಲೀಸ್ ಆಗಿ ಮೆಚ್ಚುಗೆ ಪಡೆದಿತ್ತು.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos

