ಬೆನ್ನು ನೋವು: ಜೈಲಿನ ಹೊರಗಡೆ ಚಿಕಿತ್ಸೆ ಪಡೆಯಲು ಅನುಮತಿ ಕೋರಿ ದರ್ಶನ್ ಅರ್ಜಿ
ಜೈಲಿನಲ್ಲಿ ತಮಗೆ ಉತ್ತಮ ವೈದ್ಯಕೀಯ ಚಿಕಿತ್ಸೆ ಲಭ್ಯವಾಗುತ್ತಿಲ್ಲ ಎಂದು ಆರೋಪಿಸಿ ನಟ ದರ್ಶನ್ ಪರ ವಕೀಲರು 59ನೇ ಸಿಸಿಹೆಚ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಜೈಲಿನ ಹೊರಗಡೆ ವಿಶೇಷ ಚಿಕಿತ್ಸೆ ಪಡೆಯಲು ಅನುಮತಿ ನೀಡುವಂತೆ ಕೋರಿದ್ದಾರೆ. ವಿಚಾರಣೆಯ ವೇಳೆ ನ್ಯಾಯಾಧೀಶರ ಮುಂದೆ ಖುದ್ದು ದರ್ಶನ್ ಅವರು ಮನವಿ ಮಾಡಿದ್ದಾರೆ.
ಜೈಲಿನಲ್ಲಿ ತಮಗೆ ಉತ್ತಮ ವೈದ್ಯಕೀಯ ಚಿಕಿತ್ಸೆ ಲಭ್ಯವಾಗುತ್ತಿಲ್ಲ ಎಂದು ಆರೋಪಿಸಿ ನಟ ದರ್ಶನ್ ಪರ ವಕೀಲರು 59ನೇ ಸಿಸಿಹೆಚ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ಜೈಲಿನ ಹೊರಗಡೆ ವಿಶೇಷ ಚಿಕಿತ್ಸೆ ಪಡೆಯಲು ಅನುಮತಿ ನೀಡುವಂತೆ ಕೋರಿದ್ದಾರೆ. ವಿಚಾರಣೆಯ ವೇಳೆ ನ್ಯಾಯಾಧೀಶರ ಮುಂದೆ ಖುದ್ದು ಮನವಿ ಮಾಡಿದ ದರ್ಶನ್, ‘ಜೈಲಿನಲ್ಲಿ ಕೇವಲ ಮೂರು ದಿನ ಮಾತ್ರ ಫಿಸಿಯೋಥೆರಪಿ ನೀಡಲಾಗಿದ್ದು, ಇದರಿಂದ ನನ್ನ ನೋವು ಕಡಿಮೆಯಾಗಿಲ್ಲ’ ಎಂದು ಅಳಲು ತೋಡಿಕೊಂಡಿದ್ದಾರೆ. ಅಲ್ಲದೆ, ತಮ್ಮ ಆರೋಗ್ಯದ ದೃಷ್ಟಿಯಿಂದ ಫಿಸಿಯೋಥೆರಪಿ ಚಿಕಿತ್ಸೆಯನ್ನು ಮುಂದುವರಿಸುವಂತೆ ಜೈಲು ಅಧಿಕಾರಿಗಳಿಗೆ ಸೂಚನೆ ನೀಡಬೇಕೆಂದು ನ್ಯಾಯಾಲಯಕ್ಕೆ ಮನವಿ ಮಾಡಿಕೊಂಡಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Loading...
Unable to load recommendations.
Follow Us
