ಹಣೆಗೆ ಕುಂಕುಮ ಇಟ್ಟುಕೊಂಡು ಕೋರ್ಟ್ ವಿಚಾರಣೆಗೆ ದರ್ಶನ್ ಹಾಜರು; ಕಿಕ್ಕಿರಿದ ವಕೀಲರು

Updated on: Nov 03, 2025 | 3:10 PM

ನಟ ದರ್ಶನ್ ಅವರ ವಿರುದ್ಧ ಅನೇಕ ಆರೋಪಗಳಿವೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಪ್ರಮುಖ ಆರೋಪಿ ಆಗಿದ್ದಾರೆ. ಇಂದು (ನ.3) ದೋಷಾರೋಪಣೆ ನಿಗದಿ ಮಾಡಲಾಗುತ್ತಿದೆ. ಬೆಂಗಳೂರಿನ 64ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ವಿಚಾರಣೆಯಲ್ಲಿ ಹಾಜರಾಗಲು ದರ್ಶನ್ ಅವರು ಹಣೆಗೆ ಕುಂಕುಮ ಇಟ್ಟುಕೊಂಡು ಬಂದಿದ್ದಾರೆ.

ನಟ ದರ್ಶನ್ (Darshan) ಅವರ ವಿರುದ್ಧ ಹಲವು ಆರೋಪಗಳಿವೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಅವರು ಪ್ರಮುಖ ಆರೋಪಿ ಆಗಿದ್ದಾರೆ. ಇಂದು (ನವೆಂಬರ್ 3) ದೋಷಾರೋಪಣೆ ನಿಗದಿ ಮಾಡಲಾಗುತ್ತಿದೆ. ಬೆಂಗಳೂರಿನ 64ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ವಿಚಾರಣೆಯಲ್ಲಿ ಹಾಜರಾಗಲು ದರ್ಶನ್ ಅವರು ಹಣೆಗೆ ಕುಂಕುಮ ಇಟ್ಟುಕೊಂಡು ಬಂದಿದ್ದಾರೆ. ಇಂದು ದರ್ಶನ್ ಪಾಲಿಗೆ ಮಹತ್ವದ ದಿನ. ಪವಿತ್ರಾ ಗೌಡ (Pavithra Gowda) ಸೇರಿದಂತೆ 17 ಮಂದಿ ಆರೋಪಿಗಳ ಮೇಲಿನ ದೋಷಾರೋಪಣೆ ನಿಗದಿ ಆಗಲಿದೆ. 4 ಗಂಟೆಗೆ ವಿಚಾರಣೆ ನಡೆಯಲಿದೆ. ಮುಚ್ಚಿದ ಕೊಠಡಿಯಲ್ಲಿ ವಿಚಾರಣೆ ನಡೆಸಲು ನ್ಯಾಯಾಧೀಶರು ನಿರ್ಧರಿಸಿದ್ದಾರೆ. ಕೋರ್ಟ್​​ ಹಾಲ್​​ನಲ್ಲಿ ವಕೀಲರು ಕಿಕ್ಕಿರಿದು ತುಂಬಿದ್ದರಿಂದ ಮುಚ್ಚಿದ ಕೊಠಡಿಯಲ್ಲಿ ವಿಚಾರಣೆ ನಡೆಸಲು ತೀರ್ಮಾನಿಸಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.