ಫಾರ್ಮ್​ಹೌಸ್​ನಲ್ಲಿ ಎತ್ತಿನಗಾಡಿ ಓಡಿಸಿದ ನಟ ದರ್ಶನ್; ದಾಸನ ಜಾಲಿ ಮೂಡ್

Updated on: Apr 23, 2025 | 10:59 AM

ನಟ ದರ್ಶನ್ ಅವರು ಮೈಸೂರಿನ ಫಾರ್ಮ್​ಹೌಸ್​ನಲ್ಲಿ ಇದ್ದಾರೆ. ಅಲ್ಲಿ ಅವರು ಹಾಯಾಗಿ ಸಮಯ ಕಳೆಯುತ್ತಾ ಇದ್ದಾರೆ. ಫಾರ್ಮ್​ಹೌಸ್​​ನಲ್ಲಿ ಅವರು ಎತ್ತನ್ನು ಓಡಿಸಿದ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ. ಈ ವಿಡಿಯೋಗೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಹಾಕುತ್ತಾ ಇದ್ದಾರೆ .

ನಟ ದರ್ಶನ್ (Darshan) ಅವರು ಕಳೆದ ವರ್ಷ ಸಾಕಷ್ಟು ತೊಂದರೆ ಎದುರಿಸಿದ್ದರು. ಇದಕ್ಕೆ ಕಾರಣ ಆಗಿದ್ದು ರೇಣುಕಾ ಸ್ವಾಮಿ ಕೊಲೆ ಕೇಸ್. ಈ ಕೇಸ್​ನಲ್ಲಿ ಜಾಮೀನು ಪಡೆದು ಬಂದ ಅವರ ಜೀವನ ನಿಧಾನವಾಗಿ ಮೊದಲಿನ ಸ್ಥಿತಿಗೆ ಮರಳುತ್ತಿದೆ. ಈಗ ದರ್ಶನ್ ಅವರು ಮೈಸೂರಿನ ಫಾರ್ಮ್​ಹೌಸ್​ನಲ್ಲಿ ಇದ್ದಾರೆ. ಅಲ್ಲಿ ಅವರು ಎತ್ತಿನ ಗಾಡಿ ಓಡಿಸಿದ್ದಾರೆ. ಈ ಸಂದರ್ಭದ ವಿಡಿಯೋ ಟಿವಿ9 ಕನ್ನಡಕ್ಕೆ ಲಭ್ಯವಾಗಿದೆ. ಈ ವಿಡಿಯೋ ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More