ವಿಜಯಲಕ್ಷ್ಮಿ ದರ್ಶನ್ ಸುತ್ತ ಗರಗರನೆ ತಿರುಗಿದ ಶ್ರೀ ಕರಿಕಲ್ಲಮ್ಮ ದೇವರ ಮೂರ್ತಿ

Edited By:

Updated on: Nov 03, 2026 | 6:43 PM

ಕರಿಕಲ್ಲಮ್ಮ ದೇವಸ್ಥಾನಕ್ಕೆ ಆಗಮಿಸಿದ ವಿಜಯಲಕ್ಷ್ಮಿ ಅವರು, ದರ್ಶನ್ ಅವರ ಬೆನ್ನುನೋವಿನ ಸಮಸ್ಯೆ ಶಮನವಾಗಿ, ಶೀಘ್ರದಲ್ಲೇ ಅವರಿಗೆ ಜಾಮೀನು ಸಿಗಲಿ ಎಂದು ಪ್ರಾರ್ಥಿಸಿದರು. ಅಷ್ಟೇ ಅಲ್ಲದೆ, ಜಾಮೀನು ದೊರೆತು ದರ್ಶನ್ ಜೈಲಿನಿಂದ ಹೊರಬಂದ ನಂತರ ಪತಿ ಸಮೇತ ದೇವಸ್ಥಾನಕ್ಕೆ ಆಗಮಿಸಿ ಪೂಜೆ ಸಲ್ಲಿಸುವುದಾಗಿ ಹರಕೆ ಹೊತ್ತಿದ್ದಾರೆ ಎನ್ನಲಾಗಿದೆ.

ತುಮಕೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ ಅವರಿಗೆ ಬೆನ್ನುನೋವಿನ ಸಮಸ್ಯೆ ತೀವ್ರಗೊಂಡಿರುವ ಬೆನ್ನಲ್ಲೇ, ಅವರ ಪತ್ನಿ ವಿಜಯಲಕ್ಷ್ಮಿ ಅವರು ಪತಿಯ ಆರೋಗ್ಯ ಸುಧಾರಣೆ ಹಾಗೂ ಶೀಘ್ರ ಬಿಡುಗಡೆಗಾಗಿ ದೇವರ ಮೊರೆ ಹೋಗಿದ್ದಾರೆ. ಇಂದು (ನವೆಂಬರ್ 3) ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಹೊನ್ನವಳ್ಳಿ ಹೋಬಳಿಯ ಚೌಲಿಹಳ್ಳಿ ಗ್ರಾಮದಲ್ಲಿರುವ ಪ್ರಸಿದ್ಧ ಶ್ರೀ ಕರಿಕಲ್ಲಮ್ಮ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕಳೆದ 12 ವರ್ಷಗಳಿಂದ ಬೆನ್ನುನೋವಿನ ಸಮಸ್ಯೆಯಿಂದ ಬಳಲುತ್ತಿರುವ ದರ್ಶನ್, ಇತ್ತೀಚೆಗೆ ಜೈಲಿನಲ್ಲಿ ತೀವ್ರ ಬೆನ್ನುನೋವಿನಿಂದ ನರಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಫಿಸಿಯೋಥೆರಪಿ ಚಿಕಿತ್ಸೆ ಪಡೆಯಲು ಅವಕಾಶ ನೀಡುವಂತೆ ಕೋರ್ಟ್‌ನಲ್ಲಿ ನ್ಯಾಯಾಧೀಶರಿಗೆ ಮನವಿ ಸಲ್ಲಿಕೆಯಾಗಿದೆ. ವಿಜಯಲಕ್ಷ್ಮಿ ಅವರು ದೇವಸ್ಥಾನಕ್ಕೆ ಭೇಟಿ ನೀಡಿದ ವಿಷಯ ತಿಳಿಯುತ್ತಿದ್ದಂತೆಯೇ, ದರ್ಶನ್ ಅಭಿಮಾನಿಗಳು ದೇವಸ್ಥಾನದ ಬಳಿ ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಜಗದೀಶ ಬಿ.

ಜಗದೀಶ್​ ಬಸವರಾಜು ಟಿವಿ9 ಕನ್ನಡದ ಜಿಲ್ಲಾ ವರದಿಗಾರರಾಗಿದ್ದಾರೆ. ಪ್ರಸ್ತುತ ಅವರು ತುಮಕುರು ಜಿಲ್ಲಾ ಸುದ್ದಿಗಳ ವರದಿ ಮಾಡುತ್ತಿದ್ದಾರೆ. ಹುಟ್ಟಿದ್ದು, ಬೆಳೆದಿದ್ದು ಬೆಂಗಳೂರಿನಲ್ಲಿ. ಪತ್ರಿಕೋದ್ಯಮ ಓದಿದ್ದು, ವೃತ್ತಿ ಬದುಕು ಆರಂಭಿಸಿದ್ದು ಕೂಡಾ ಬೆಂಗಳೂರಿನಲ್ಲಿ. ಟಿವಿ9ನಲ್ಲಿ ಎಂಟು ವರ್ಷ ಸಹಿತ ಹತ್ತು ವರ್ಷದ ಕ್ರೈಂ ವರದಿಗಾರಿಕೆಯ ಅನುಭವದ ಜೊತೆ ಸದ್ಯ ೨೦೨೫ರಿಂದ ತುಮಕೂರು ಜಿಲ್ಲಾವರದಿಗಾರನಾಗಿ ಮಾದ್ಯಮದ ವೃತ್ತಿ ಬದುಕು ಮುಂದುವರೆದಿದೆ.

Read More