ಸಿಎಂ ಡಿಕೆ ಶಿವಕುಮಾರ್ ಮನೆಗೆ ಭೇಟಿ ನೀಡಿದ ಹಿರಿಯ ನಟ ದೇವರಾಜ್ ಕುಟುಂಬ

Updated on: Oct 15, 2026 | 4:47 PM

ಹಿರಿಯ ನಟ ದೇವರಾಜ್ ಅವರ ಮನೆಯಲ್ಲಿ ಶುಭ ಕಾರ್ಯಕ್ಕೆ ಸಿದ್ಧತೆ ನಡೆಯುತ್ತಿದೆ. ದೇವರಾಜ್ ಅವರ ಎರಡನೇ ಪುತ್ರ ಪ್ರಣಮ್ ದೇವರಾಜ್ ಅವರು ಹಸೆಮಣೆ ಏರಲು ಸಜ್ಜಾಗಿದ್ದಾರೆ. ಮಗನ ವಿವಾಹದ ಸಲುವಾಗಿ ಎಲ್ಲ ಸೆಲೆಬ್ರಿಟಿಗಳಿಗೆ ಹಾಗೂ ವಿವಿಧ ಕ್ಷೇತ್ರದ ಗಣ್ಯರಿಗೆ ದೇವರಾಜ್ ಅವರು ಆಹ್ವಾನ ಪತ್ರಿಕೆ ನೀಡುತ್ತಿದ್ದಾರೆ.

ಹಿರಿಯ ನಟ ದೇವರಾಜ್ ಅವರ ಮನೆಯಲ್ಲಿ ಶುಭ ಕಾರ್ಯಕ್ಕೆ ಸಿದ್ಧತೆ ನಡೆಯುತ್ತಿದೆ. ದೇವರಾಜ್ ಅವರ ಎರಡನೇ ಪುತ್ರ ಪ್ರಣಮ್ ದೇವರಾಜ್ ಅವರು ಹಸೆಮಣೆ ಏರಲು ಸಜ್ಜಾಗಿದ್ದಾರೆ. ಮಗನ ವಿವಾಹದ ಸಲುವಾಗಿ ಎಲ್ಲ ಸೆಲೆಬ್ರಿಟಿಗಳಿಗೆ ಹಾಗೂ ವಿವಿಧ ಕ್ಷೇತ್ರದ ಗಣ್ಯರಿಗೆ ದೇವರಾಜ್ ಅವರು ಆಹ್ವಾನ ಪತ್ರಿಕೆ ನೀಡುತ್ತಿದ್ದಾರೆ. ಇಂದು (ಅಕ್ಟೋಬರ್ 15) ದೇವರಾಜ್ ಅವರು ಕುಟುಂಬ ಸಮೇತರಾಗಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಆಹ್ವಾನ ಪತ್ರಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿರುವ ಡಿಕೆಶಿ ನಿವಾಸಕ್ಕೆ ಬಂದು ಆಹ್ವಾನಿಸಲಾಗಿದೆ. ದೇವರಾಜ್, ಪತ್ನಿ ಚಂದ್ರಲೇಖಾ, ಮಕ್ಕಳಾದ ಪ್ರಜ್ವಲ್ ದೇವರಾಜ್, ಪ್ರಣಮ್ ದೇವರಾಜ್ ಅವರು ಮುಖ್ಯಮಂತ್ರಿಗಳಿಗೆ ವಿವಾಹದ ಆಮಂತ್ರಣ ಪತ್ರಿಕೆ ನೀಡಿದ್ದಾರೆ. ಸಿಎಂ ಮನೆಗೆ ‘ಡೈನಾಮಿಕ್ ಸ್ಟಾರ್’ ದೇವರಾಜ್ ಕುಟುಂಬ ಭೇಟಿ ನೀಡಿದ ಸಂದರ್ಭದ ವಿಡಿಯೋ ಇಲ್ಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More