ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್

Updated on: Jul 28, 2026 | 6:33 PM

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ಅವರು ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ಅವರ ಆಪ್ತವಲಯದಲ್ಲಿ ನಟ ಧನ್ವೀರ್ ಗುರುತಿಸಿಕೊಂಡಿದ್ದಾರೆ. ಆದರೆ ಕಳೆದ ಕೆಲವು ದಿನಗಳಿಂದ ದರ್ಶನ್ ಕುಟುಂಬದ ಜೊತೆ ಧನ್ವೀರ್ ಅವರಿಗೆ ಮನಸ್ತಾಪ ಉಂಟಾಗಿದೆ ಎಂಬ ಮಾತು ಕೇಳಿಬಂದಿತ್ತು.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ಅವರು ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ಅವರ ಆಪ್ತವಲಯದಲ್ಲಿ ನಟ ಧನ್ವೀರ್ ಗುರುತಿಸಿಕೊಂಡಿದ್ದಾರೆ. ಆದರೆ ಕಳೆದ ಕೆಲವು ದಿನಗಳಿಂದ ದರ್ಶನ್ ಕುಟುಂಬದ ಜೊತೆ ಧನ್ವೀರ್ ಅವರಿಗೆ ಮನಸ್ತಾಪ ಉಂಟಾಗಿದೆ ಎಂಬ ಮಾತು ಕೇಳಿಬಂದಿತ್ತು. ಇತ್ತೀಚಿನ ದಿನಗಳಲ್ಲಿ ದರ್ಶನ್ ಅವರನ್ನು ಭೇಟಿ ಮಾಡಲು ಧನ್ವೀರ್ (Dhanveer) ಅವರು ಜೈಲಿನ ಬಳಿ ಸುಳಿದಿರಲಿಲ್ಲ. ಆದರೆ ಈಗ ವೈಮನಸ್ಸು ಮರೆತು ಮತ್ತೆ ಜೈಲಿಗೆ ಬಂದಿದ್ದಾರೆ. ದರ್ಶನ್ ಅವರನ್ನು ಭೇಟಿ ಮಾಡಲು ಧನ್ವೀರ್ ಅವರು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಹೋಗಿರುವ ವಿಡಿಯೋ ಇಲ್ಲಿದೆ. ದರ್ಶನ್ ಅವರಿಗೆ ಜಾಮೀನು ಕೊಡಿಸಲು ಅವರ ಕುಟುಂಬದವರು ಪ್ರಯತ್ನಿಸುತ್ತಿದ್ದಾರೆ. ಇತ್ತೀಚೆಗೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮತ್ತು ನಟಿ ರಕ್ಷಿತಾ ಪ್ರೇಮ್ ಅವರು ಕೂಡ ಜೈಲಿಗೆ ಭೇಟಿ ನೀಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More