AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್

‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್

ಮದನ್​ ಕುಮಾರ್​
|

Updated on: Jun 12, 2025 | 10:01 PM

Share

ನಟ ದಿಗಂತ್ ಅವರು ‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾದಲ್ಲಿ ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ಟ್ರೇಲರ್ ಬಿಡುಗಡೆ ಆದಾಗಲೇ ಇದು ಡಿಫರೆಂಟ್ ಸಿನಿಮಾ ಎಂಬುದು ಪ್ರೇಕ್ಷಕರಿಗೆ ಗೊತ್ತಾಯಿತು. ಜೂನ್ 13ರಂದು ಈ ಚಿತ್ರ ಬಿಡುಗಡೆ ಆಗುತ್ತಿದೆ. ಈ ಸಿನಿಮಾದ ಬಗ್ಗೆ ದಿಗಂತ್ ಅವರು ಟಿವಿ9 ಸಂದರ್ಶನದಲ್ಲಿ ಮಾತನಾಡಿದ್ದಾರೆ.

‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾದಲ್ಲಿ ನಟ ದಿಗಂತ್ (Diganth Manchale), ನಿಧಿ ಸುಬ್ಬಯ್ಯ ಮುಂತಾದವರು ಅಭಿನಯಿಸಿದ್ದಾರೆ. ಈ ಸಿನಿಮಾದ ವಿಶೇಷತೆ ಏನು ಎಂಬುದನ್ನು ದಿಗಂತ್ (Diganth) ಅವರು ಈ ಸಂದರ್ಶನದಲ್ಲಿ ವಿವರಿಸಿದ್ದಾರೆ. ಒಂದು ಡಿಫರೆಂಟ್ ಸಿನಿಮಾ ನೋಡಬೇಕು ಎಂಬ ಪ್ರೇಕ್ಷಕರಿಗೆ ಇದು ಉತ್ತಮ ಆಯ್ಕೆ ಎಂಬುದು ಟ್ರೇಲರ್ ನೋಡಿದರೆ ಗೊತ್ತಾಗುತ್ತದೆ. ಹಾಗಾದರೆ ಈ ಸಿನಿಮಾದಲ್ಲಿ ಏನೆಲ್ಲ ಇದೆ? ಪ್ರೇಕ್ಷಕರಿಗೆ ಯಾವ ರೀತಿ ಮನರಂಜನೆ ಸಿಗುತ್ತದೆ? ‘ಎಡಗೈಯೇ ಅಪಘಾತಕ್ಕೆ ಕಾರಣ’ (Edagaiye Apaghatakke Karana) ಎಂದು ಶೀರ್ಷಿಕೆ ಇಡಲು ಕಾರಣ ಏನು ಎಂಬಿತ್ಯಾದಿ ಪ್ರಶ್ನೆಗಳಿಗೆ ದಿಗಂತ್ ಅವರು ಉತ್ತರಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More