AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್

ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್

ಮದನ್​ ಕುಮಾರ್​
|

Updated on: Apr 23, 2026 | 10:36 PM

Share

ನಟ ದಿಗಂತ್ ಅವರು ‘ರುದ್ರ ಕಾಲ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಮುಹೂರ್ತ ಇತ್ತೀಚೆಗೆ ನೆರವೇರಿತು. ಈ ವೇಳೆ ಸುದ್ದಿಗೋಷ್ಠಿ ನಡೆಸಲಾಯಿತು. ದಿಗಂತ್ ಅವರು ಮಾತನಾಡಿ ಸಿನಿಮಾ ಬಗ್ಗೆ ಮಾಹಿತಿ ನೀಡಿದರು. ಚಿತ್ರರಂಗದ ಸದ್ಯದ ಪರಿಸ್ಥಿತಿ ಹೇಗಿದೆ ಎಂಬುದನ್ನು ಅವರು ವಿವರಿಸಿದರು.

ನಟ ದಿಗಂತ್ ಅವರು ‘ರುದ್ರ ಕಾಲ’ (Rudra Kala) ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಮುಹೂರ್ತ ಇತ್ತೀಚೆಗೆ ನೆರವೇರಿತು. ಈ ವೇಳೆ ಸುದ್ದಿಗೋಷ್ಠಿ ನಡೆಸಲಾಯಿತು. ದಿಗಂತ್ ಅವರು ಮಾತನಾಡಿ ಸಿನಿಮಾ ಬಗ್ಗೆ ಮಾಹಿತಿ ನೀಡಿದರು. ಚಿತ್ರರಂಗದ (Kannada Film Industry) ಸದ್ಯದ ಪರಿಸ್ಥಿತಿ ಹೇಗಿದೆ ಎಂಬುದನ್ನು ಅವರು ವಿವರಿಸಿದರು. ದಿಗಂತ್ ಅವರು ಕನ್ನಡ ಮಾತ್ರವಲ್ಲದೇ ತೆಲುಗಿನಲ್ಲಿಗೂ ನಟಿಸುತ್ತಿದ್ದಾರೆ. ‘ಕನ್ನಡ ಸಿನಿಮಾ ಗೆಲ್ಲಲಿ. ಈಗ ನಾನು ಒಂದು ತೆಲುಗು ಸಿನಿಮಾದ ಶೂಟಿಂಗ್ ಮುಗಿಸಿ ಬಂದೆ. ಅಲ್ಲಿನವರಿಗೆ ಒಟಿಟಿಯಿಂದ ಎಫೆಕ್ಟ್ ಆಗಿಲ್ಲ. ಅಲ್ಲಿ ಪ್ರತಿ ವಾರ ಒಂದು ಸಿನಿಮಾ ಯಶಸ್ವಿ ಆಗುತ್ತಿದೆ. ನಮ್ಮ ಕನ್ನಡ ಚಿತ್ರರಂಗದಲ್ಲಿ ಯಾಕೆ ಆ ರೀತಿ ಆಗುತ್ತಿಲ್ಲ ಅಂತ ನನಗೆ ದುಃಖ ಆಯಿತು’ ಎಂದು ದಿಗಂತ್ (Diganth Manchale) ಅವರು ಹೇಳಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More