ದರ್ಶನ್ ನನಗೆ ಚೀಲದ ತುಂಬ ಹಣ ಕಳಿಸಿದ್ದರು: ನಟ ಹರೀಶ್ ರಾಯ್
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ತೂಗುದೀಪ ಜೈಲು ಸೇರಿದ್ದಾರೆ. ಈ ಹಿಂದೆ ಪ್ರಕರಣವೊಂದರಲ್ಲಿ ಜೈಲು ಸೇರಿದ್ದ ನಟ ಹರೀಶ್ ರಾಯ್, ಹಿಂದೊಮ್ಮೆ ದರ್ಶನ್ ತಮಗೆ ಮಾಡಿದ್ದ ಸಹಾಯ ನೆನಪಿಸಿಕೊಂಡಿದ್ದಾರೆ.
ನಟ ದರ್ಶನ್, ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಜೈಲು ಸೇರಿದ್ದಾರೆ. ಈ ಸಂದರ್ಭದಲ್ಲಿ ಸಿನಿಮಾ ನಟರು ಒಬ್ಬೊಬ್ಬರು ಒಂದೊಂದು ರೀತಿ ಮಾತನಾಡುತ್ತಿದ್ದಾರೆ. ಕೆಲವರು ದರ್ಶನ್ ಪರ ನಿಂತಿದ್ದರೆ, ಕೆಲವರು ದರ್ಶನ್ ವಿರುದ್ಧ ಮಾತನಾಡಿದ್ದಾರೆ. ಕೆಲವರು ಮೌನವಾಗಿ ಉಳಿದಿದ್ದಾರೆ. ಕನ್ನಡ ಸಿನಿಮಾಗಳಲ್ಲಿ ಬ್ಯಾಡ್ ಬಾಯ್ ಆಗಿ ಗುರುತಿಸಿಕೊಂಡಿರುವ ನಟ ಹರೀಶ್ ರಾಯ್ ಸಹ ಈ ಹಿಂದೆ ಪ್ರಕರಣವೊಂದರಲ್ಲಿ ಜೈಲು ಸೇರಿದ್ದರು. ಟಿವಿ9 ಜೊತೆಗೆ ಮಾತನಾಡಿರುವ ಹರೀಶ್ ರಾಯ್, ಹಿಂದೆ ತಮ್ಮ ಸಂಕಷ್ಟದ ಸಮಯದಲ್ಲಿ ದರ್ಶನ್ ತಮಗೆ ದೊಡ್ಡ ಮಟ್ಟದಲ್ಲಿ ಸಹಾಯ ಮಾಡಿದ್ದರು ಎಂದು ಹೇಳಿಕೊಂಡಿದ್ದಾರೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ