Jaggesh: ದೇವರ ಸಮಾನರಾದ ವೀರೇಂದ್ರ ಹೆಗ್ಗಡೆ ರಾಜ್ಯಸಭೆಗೆ ನಾಮನಿರ್ದೇಶನವಾಗಿದ್ದರಿಂದ ಹೆಮ್ಮೆಯಾಗಿದೆ; ಜಗ್ಗೇಶ್ ಸಂತಸ
ಧರ್ಮಸ್ಥಳದ ವೀರೇಂದ್ರ ಹೆಗ್ಗಡೆಯವರು ಕರ್ನಾಟಕದಲ್ಲಿ ದೇವರ ಸಮಾನ. ಧರ್ಮಸ್ಥಳದ ಮಂಜುನಾಥನ ಕ್ಷೇತ್ರದಲ್ಲಿ ಅವರು ವಿದ್ಯೆ, ಗ್ರಾಮೀಣಾಭಿವೃದ್ಧಿಗೆ ಮಾಡಿರುವ ಕಾರ್ಯಗಳನ್ನು ಬೇರಾರೂ ಮಾಡಿಲ್ಲ ಎಂದು ಜಗ್ಗೇಶ್ ಹೇಳಿದ್ದಾರೆ.
ಈ ಬಾರಿ ರಾಜ್ಯಸಭೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ, ಸಂಗೀತ ನಿರ್ದೇಶಕ ಇಳಯರಾಜ, ಖ್ಯಾತ ಅಥ್ಲೀಟ್ ಪಿ.ಟಿ. ಉಷಾ, ಸಿನಿಮಾ ಕತೆಗಾರ ವಿ. ವಿಜಯೇಂದ್ರ ಪ್ರಸಾದ್ ಅವರನ್ನು ನಾಮ ನಿರ್ದೇಶನ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ನಟ ಹಾಗೂ ರಾಜ್ಯಸಭಾ ಸದಸ್ಯ ಜಗ್ಗೇಶ್, ಧರ್ಮಸ್ಥಳದ ವೀರೇಂದ್ರ ಹೆಗ್ಗಡೆಯವರು ಕರ್ನಾಟಕದಲ್ಲಿ ದೇವರ ಸಮಾನ. ಧರ್ಮಸ್ಥಳದ ಮಂಜುನಾಥನ ಕ್ಷೇತ್ರದಲ್ಲಿ ಅವರು ವಿದ್ಯೆ, ಗ್ರಾಮೀಣಾಭಿವೃದ್ಧಿಗೆ ಮಾಡಿರುವ ಕಾರ್ಯಗಳನ್ನು ಬೇರಾರೂ ಮಾಡಿಲ್ಲ. ಕೇಂದ್ರ ಸರ್ಕಾರ ರಾಜ್ಯಸಭೆಗೆ ಸಾಧಕರನ್ನು ಆಯ್ಕೆ ಮಾಡಿರುವ ಮಾನದಂಡದ ಬಗ್ಗೆ ನನಗೆ ಬಹಳ ಹೆಮ್ಮೆಯಿದೆ ಎಂದು ಹೇಳಿದ್ದಾರೆ.
Published on: Jul 07, 2022 03:45 PM
Latest Videos