ಸೆಲ್ಫಿಗೆ ಕಾಜೋಲ್ ಮೇಲೆ ಮುಗಿಬಿದ್ದ ಫ್ಯಾನ್ಸ್; ಭಯಪಡುತ್ತಾ ಸಾಗಿದ ನಟಿ

Updated on: Mar 16, 2026 | 12:17 PM

ನಟಿ ಕಾಜೋಲ್ ಅವರು ಬಾಲಿವುಡ್ ಸ್ಟಾರ್ ನಟಿ. ಅವರಿಗೆ ಚಿತ್ರರಂಗದಲ್ಲಿ ಬೇಡಿಕೆ ಇದೆ. ಅವರು ಸೋಶೀಯಲ್ ಮೀಡಿಯಾದಲ್ಲಿ ಹೆಸರು ಮಾಡಿದ್ದಾರೆ. ಈಗ ಕಾಜೋಲ್ ಅವರು ಭಯ ಪಡುವ ರೀತಿಯ ಸ್ಥಿತಿ ನಿರಮಾಣ ಆಯಿತು. ಸೋಶಿಯಲ್ ಮೀಡಿಯಾದಲ್ಲಿ ಹೊಸ ವಿಡಿಯೋ ಒಂದು ವೈರಲ್ ಆಗಿದೆ. ಈ ವಿಡಿಯೋದಲ್ಲಿ ಕಾಜೋಲ್ ಅವರು ಭಯಪಟ್ಟಿದ್ದು ಕಾಣಿಸಿದೆ. 

ಯಾವುದೇ ಸೆಲೆಬ್ರಿಟಿ ಹೊರಗೆ ಕಾಣಿಸಿಕೊಂಡರೆ ಸಾಕು, ಅವರನ್ನು ಫ್ಯಾನ್ಸ್ ಮುತ್ತಿಕೊಳ್ಳುತ್ತಾರೆ. ಹೀಗಾಗದಂತೆ ತಡೆಯಲು ಭದ್ರತಾ ಸಿಬ್ಬಂದಿ ಎಷ್ಟೇ ಪ್ರಯತ್ನಿಸಿದರೂ ಅದು ಸಾಧ್ಯವಾಗೋದಿಲ್ಲ. ಈಗ ಕಾಜೋಲ್ ಅವರಿಗೆ ಹಾಗೆಯೇ ಆಗಿದೆ. ಅವರು ಬಾಲಿವುಡ್ ನಟಿ. ಅಜಯ್ ದೇವಗನ್ ಪತ್ನಿ. ಅವರು ಬರುತ್ತಾರೆ ಎಂದರೆ ಸಾಕಷ್ಟು ಭದ್ರತೆ ನೀಡಲಾಗುತ್ತದೆ. ಆದಾಗ್ಯೂ ಅಭಿಮಾನಿಗಳು ಮುತ್ತಿಕೊಂಡರು. ಕೊನೆಗೆ ಅವರು ಕಷ್ಟಪಟ್ಟು ಕಾರನ್ನು ಏರಿದ್ದಾರೆ. ಆ ಸಂದರ್ಭದ ವಿಡಿಯೋ ಮೇಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ಹೆಗಡೆ ದುಗ್ಗುಮನೆ

ರಾಜೇಶ್ ಹೆಗಡೆ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More