Karnataka Assembly Polls: ಬಿಜೆಪಿ ಅಭ್ಯರ್ಥಿಗಳ ಪರ ನಟ ಕಿಚ್ಚ ಸುದೀಪ್ ಇಂದಿನಿಂದ ಪ್ರಚಾರ, ಬೊಮ್ಮಾಯಿಯವರ ಕ್ಷೇತ್ರ ಶಿಗ್ಗಾಂವಿಯಿಂದ ಆರಂಭ

ಅರುಣ್​ ಕುಮಾರ್​ ಬೆಳ್ಳಿ

Updated on: Apr 19, 2023 | 10:54 AM

ತಾನೊಬ್ಬ ಕಲಾವಿದನಾಗಿರುವುದರಿಂದ ಬೇರೆ ಪಕ್ಷಗಳು ತನ್ನಿಂದ ಪ್ರಚಾರ ಬಯಸುವುದು ಸ್ವಾಭಾವಿಕ, ಆದರೆ ಈ ಬಾರಿ ಬಿಜೆಪಿಗೆ ಕಮಿಟ್ ಆಗಿರುವುದರಿಂದ ಆ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಮಾಡುವುದಾಗಿ ಸುದೀಪ್ ಹೇಳಿದರು.

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರಿಗೆ ನೀಡಿದ ಭರವಸೆಯಂತೆ ಸಿನಿಮಾ ನಟ ಕಿಚ್ಚ ಸುದೀಪ್ (Kiccha Sudeep) ಇಂದಿನಿಂದ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಮಾಡಲಿದ್ದಾರೆ. ಬೊಮ್ಮಾಯಿ ಸ್ಪರ್ಧಿಸುತ್ತಿರುವ ಶಿಗ್ಗಾಂವಿ (Shiggaon) ಕ್ಷೇತ್ರಕ್ಕೆ ತೆರಳುವ ಮೊದಲು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಸುದೀಪ್ ಯಾವ್ಯಾವ ಅಭ್ಯರ್ಥಿಗಳ ಬಗ್ಗೆ ಪ್ರಚಾರ ಮಾಡಬೇಕೆಂದು ಮುಖ್ಯಮಂತ್ರಿಗಳು ಒಂದು ಲಿಸ್ಟ್ ಮಾಡಿಕೊಂಡಿದ್ದಾರೆ, ಆ ಪಟ್ಟಿಯ ಪ್ರಕಾರ ಪ್ರಚಾರ ಕಾರ್ಯ ನಡೆಸುವುದಾಗಿ ಹೇಳಿದರು. ಬೇರೆ ಪಕ್ಷದ ಅಭ್ಯರ್ಥಿಗಳ ಪರವೂ ಕ್ಯಾಂಪೇನ್ ಮಾಡುವಿರಾ ಅಂತ ಕೇಳಿದಾಗ, ತಾನೊಬ್ಬ ಕಲಾವಿದನಾಗಿರುವುದರಿಂದ ಬೇರೆ ಪಕ್ಷಗಳು ತನ್ನಿಂದ ಪ್ರಚಾರ ಬಯಸುವುದು ಸ್ವಾಭಾವಿಕ, ಆದರೆ ಈ ಬಾರಿ ಬಿಜೆಪಿಗೆ ಕಮಿಟ್ ಆಗಿರುವುದರಿಂದ ಆ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಮಾಡುವುದಾಗಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.