ನಟ ಉಮೇಶ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿಯುತ್ತಿರುವ ಚಿತ್ರರಂಗ

Updated on: Nov 30, 2025 | 11:03 AM

ಹಿರಿಯ ಕಲಾವಿದ ಎಂ.ಎಸ್. ಉಮೇಶ್ ಅವರು ಕೊನೆಯುಸಿರು ಎಳೆದಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ. ಅಭಿಮಾನಿಗಳು, ಆಪ್ತರು ಮತ್ತು ಚಿತ್ರರಂಗದವರು ಬಂದು ಅಂತಿಮ ದರ್ಶನ ಪಡೆಯುತ್ತಿದ್ದಾರೆ. ಲೈವ್ ವಿಡಿಯೋ ಇಲ್ಲಿದೆ ನೋಡಿ..

350ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದ ಹಿರಿಯ ಕಲಾವಿದ ಎಂ.ಎಸ್. ಉಮೇಶ್ (MS Umesh) ಅವರು ಕೊನೆಯುಸಿರು ಎಳೆದಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ನಿಧನರಾಗಿದ್ದಾರೆ. ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ. ಅಭಿಮಾನಿಗಳು, ಆಪ್ತರು ಮತ್ತು ಚಿತ್ರರಂಗದವರು ಬಂದು ಅಂತಿಮ ದರ್ಶನ ಪಡೆಯುತ್ತಿದ್ದಾರೆ. ಕುಟುಂಬದವರು ಅಂತ್ಯಕ್ರಿಯೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. 1960ರಿಂದಲೂ ಚಿತ್ರರಂಗದಲ್ಲಿ ಉಮೇಶ್ ಅವರು ಸಕ್ರಿಯರಾಗಿದ್ದರು. ಅವರ ಜೊತೆಗಿನ ಒಡನಾಟವನ್ನು ನೆನಪು ಮಾಡಿಕೊಂಡು ಸೆಲೆಬ್ರಿಟಿಗಳು ಕಂಬನಿ ಮಿಡಿಯುತ್ತಿದ್ದಾರೆ. ಉಮೇಶ್ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More