ಅಪ್ಪು ಅಭಿಮಾನಿಗಳ ಪುಣ್ಯದ ಕೆಲಸ: ಮನಸಾರೆ ಹೊಗಳಿದ ನಟ ಪ್ರಥಮ್

Updated on: Mar 17, 2026 | 10:21 PM

ಪುನೀತ್ ರಾಜ್​ಕುಮಾರ್ ಹೆಸರಲ್ಲಿ ಅಭಿಮಾನಿಗಳು ಪುಣ್ಯದ ಕೆಲಸಗಳನ್ನು ಮಾಡುತ್ತಿದ್ದಾರೆ. ಅದನ್ನು ನಟ ಪ್ರಥಮ್ ಮೆಚ್ಚಿಕೊಂಡಿದ್ದಾರೆ. ಇಂದು (ಮಾರ್ಚ್ 17) ಅಪ್ಪು ಹುಟ್ಟುಹಬ್ಬ. ಆ ಪ್ರಯುಕ್ತ ಅಪಾರ ಸಂಖ್ಯೆಯ ಫ್ಯಾನ್ಸ್, ಕುಟುಂಬದವರು, ಹಲವು ಸೆಲೆಬ್ರಿಟಿಗಳು ಸಮಾಧಿ ಸ್ಥಳಕ್ಕೆ ಭೇಟಿ ನೀಡಿ ನಮನ ಸಲ್ಲಿಸಿದ್ದಾರೆ.

ನಟ ಪುನೀತ್ ರಾಜ್​ಕುಮಾರ್ (Puneeth Rajkumar) ಹೆಸರಿನಲ್ಲಿ ಅವರ ಅಭಿಮಾನಿಗಳು ಪುಣ್ಯದ ಕೆಲಸಗಳನ್ನು ಮಾಡುತ್ತಿದ್ದಾರೆ. ಅದನ್ನು ನಟ ಪ್ರಥಮ್ ಮೆಚ್ಚಿಕೊಂಡಿದ್ದಾರೆ. ಇಂದು (ಮಾರ್ಚ್ 17) ಅಪ್ಪು ಹುಟ್ಟುಹಬ್ಬ. ಆ ಪ್ರಯುಕ್ತ ಅಪಾರ ಸಂಖ್ಯೆಯ ಅಭಿಮಾನಿಗಳು, ಕುಟುಂಬದವರು, ಅನೇಕ ಸೆಲೆಬ್ರಿಟಿಗಳು ಸಮಾಧಿ ಸ್ಥಳಕ್ಕೆ ಭೇಟಿ ನೀಡಿ ನಮನ ಸಲ್ಲಿಸಿದ್ದಾರೆ. ನಟ ಪ್ರಥಮ್ (Pratham) ಅವರು ಈ ವೇಳೆ ಮಾತನಾಡಿದರು. ‘ಅಭಿಮಾನಿಗಳು ನೇತ್ರದಾನ ಮಹಾದಾನ ಎಂಬ ಈ ಕೆಲಸವನ್ನು ನಾಲ್ಕು ವರ್ಷಗಳಿಂದ ಶ್ರಮವಹಿಸಿ ಮಾಡುತ್ತಿದ್ದಾರೆ. ಅಪ್ಪು ಸರ್ ಹೆಸರಲ್ಲಿ ಇದು ಅದ್ಭುತವಾದ ಕೆಲಸ. ಇಂಥ ಒಳ್ಳೆಯ ಕೆಲಸ ಮಾಡುವ ಅಭಿಮಾನಿಗಳ ಬಗ್ಗೆ ನನಗೆ ಯಾವಾಗಲೂ ಖುಷಿ ಆಗುತ್ತದೆ. ಯಾರಿಗೋ ಬೈಯ್ಯಿರಿ, ಹೊಡೆಯಿರಿ ಅಂತ ಪುನೀತ್ ರಾಜ್​ಕುಮಾರ್ ಅಭಿಮಾನಿಗಳು ಹೇಳಲ್ಲ’ ಎಂದಿದ್ದಾರೆ ನಟ, ‘ಬಿಗ್ ಬಾಸ್ ಕನ್ನಡ 4’ ವಿನ್ನರ್ ಪ್ರಥಮ್.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More