‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್

Edited By:

Updated on: May 16, 2025 | 10:52 PM

ಕನ್ನಡದ ನಟ ಪ್ರಥಮ್ ಅವರು ‘ನೋ ಕೊಕೇನ್’ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಇದೊಂದು ಮಾಸ್ ಸಿನಿಮಾ ಎಂದು ಪ್ರಥಮ್ ಹೇಳಿದ್ದಾರೆ. ಈ ಚಿತ್ರದ ಬಜೆಟ್ ದೊಡ್ಡದು ಎಂದು ಅವರು ಹೇಳಿದ್ದಾರೆ. ಈ ಸಿನಿಮಾ ಖಂಡಿತಾ ಹಿಟ್ ಆಗುತ್ತದೆ ಎಂಬ ಭರವಸೆಯಲ್ಲಿ ಅವರಿದ್ದಾರೆ. ಟಿವಿ9 ಜೊತೆ ಪ್ರಥಮ್ ಮಾತನಾಡಿದ್ದಾರೆ.

ನಟ ಪ್ರಥಮ್ ಅವರು ‘ನೋ ಕೊಕೇನ್’ (No Cocaine) ಸಿನಿಮಾದಲ್ಲಿ ನಟಿಸಿದ್ದಾರೆ. ಇದೊಂದು ಮಾಸ್ ಸಿನಿಮಾ ಎಂದು ಅವರು ಹೇಳಿದ್ದಾರೆ. ಈ ಸಿನಿಮಾದ ಬಜೆಟ್ ಜಾಸ್ತಿ ಎಂದು ಅವರು ಹೇಳಿದ್ದಾರೆ. ‘ಈ ಸಿನಿಮಾಗೆ ಸಾಕಷ್ಟು ತಯಾರಿ ಮಾಡಲಾಗಿದೆ. ನಿಮಗೊಂದು ವಿಷಯ ಗೊತ್ತಾ? ಈ ಸಿನಿಮಾದಲ್ಲಿ ನನ್ನ ಹೇರ್ ಕಟಿಂಗ್​ಗೆ ಒಂದು ಲಕ್ಷ ರೂಪಾಯಿ ಖರ್ಚಾಗಿದೆ. ಪ್ರತಿ ದೃಶ್ಯಕ್ಕೂ ಹೇರ್​ ಸ್ಟೈಲ್ ನಿಖರವಾಗಿ ಇರಬೇಕು. ಇದು ವಿಶೇಷವಾದ ಆ್ಯಕ್ಷನ್ ಸಿನಿಮಾ’ ಎಂದು ಪ್ರಥಮ್ (Pratham) ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: May 16, 2025 10:40 PM
Loading...
Unable to load recommendations.
Follow Us
ಮಂಗಳ ರಾಜ್

ಮಂಗಳ ರಾಜ್ ಮೂಲತಃ ಮಧುಗಿರಿ ಬಳಿಯ ರತ್ನಗಿರಿ ರಂಗಾಪುರದವರು. ಇವರು ಸುದ್ದಿ ಮಧ್ಯಮಕ್ಕೆ ಕಾಲಿಟ್ಟು 13 ವರ್ಷಗಳಾಗಿವೆ. ಈಟಿವಿಯಲ್ಲಿ ಇಂಟರ್​ನ್​ಶಿಪ್​ , ಮಧ್ಯಮದ ಅ, ಆ ಇ ಈ ಕಲಿತಿದ್ದು ಕಸ್ತೂರಿ ನ್ಯೂಸ್ 24 ನಲ್ಲಿ ನಂತ್ರ ರಾಜ್ ನ್ಯೂಸ್, ದಿಗ್ವಿಜಯ ನ್ಯೂಸ್ ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. 2021ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮುಂದುವರಿಸಿದ್ದಾರೆ. ಸಿನಿಮಾ ಅಂದ್ರೆ ಬಾಲ್ಯದಿಂದಲೂ ಹುಚ್ಚು. ಅರಸಿ ಬಂದಿದ್ದು ಸಿನಿಮಾ ಜರ್ನಲಿಸ್ಟ್ ಕೆಲಸ. ಸಿನಿಮಾ ಸುದ್ದಿಗಳ ಕವರೇಜ್, ಸಿನಿಮಾ ಹಾಗೂ ಸಿನಿಮಾ ಮಂದಿಯ ವಿವಾದಗಳು, ವಿಮರ್ಶೆ, ಸಿನಿಮಾದವರ ಸಾವು ನೋವು ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವುಗಳ ವರದಿಗಾರಿಕೆ ಇವರ ಕಾಯಕ. ಸಿನಿಮಾ ನೋಡುವುದೇ ಎಲ್ಲಾ ಆಸಕ್ತಿಗಳಿಗಿಂತ ಹೆಚ್ಚು ಆಸಕ್ತಿ.

Read More