‘ಕೆಡಿ’ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್ ಅರವಿಂದ್

Updated on: Apr 22, 2026 | 10:06 PM

ನಟ ರಮೇಶ್ ಅರವಿಂದ್ ಅವರು ‘ಕೆಡಿ’ ಸಿನಿಮಾದಲ್ಲಿ ಒಂದು ಪ್ರಮುಖ ಪಾತ್ರ ಮಾಡಿದ್ದಾರೆ. ಈ ಸಿನಿಮಾದಲ್ಲಿ ಅವರ ಪಾತ್ರ ಹೇಗಿರಲಿದೆ ಎಂಬುದರ ಝಲಕ್ ಈಗಾಗಲೇ ಟ್ರೇಲರ್​ನಲ್ಲಿ ಕಾಣಿಸಿದೆ. ಏಪ್ರಿಲ್ 30ರಂದು ಈ ಸಿನಿಮಾ ಬಿಡುಗಡೆ ಆಗಲಿದೆ. ಸಿನಿಮಾದ ಶೀರ್ಷಿಕೆಯೇ ಗಮನ ಸೆಳೆಯುತ್ತಿದೆ.

ನಟ ರಮೇಶ್ ಅರವಿಂದ್ (Ramesh Aravind) ಅವರು ‘ಕೆಡಿ’ ಸಿನಿಮಾದಲ್ಲಿ ಒಂದು ಪ್ರಮುಖ ಪಾತ್ರ ಮಾಡಿದ್ದಾರೆ. ಈ ಸಿನಿಮಾದಲ್ಲಿ ಅವರ ಪಾತ್ರ ಹೇಗಿರಲಿದೆ ಎಂಬುದರ ಝಲಕ್ ಈಗಾಗಲೇ ಟ್ರೇಲರ್​ನಲ್ಲಿ ಕಾಣಿಸಿದೆ. ಏಪ್ರಿಲ್ 30ರಂದು ಈ ಸಿನಿಮಾ ಬಿಡುಗಡೆ ಆಗಲಿದೆ. ಸಿನಿಮಾದ ಶೀರ್ಷಿಕೆಯೇ ಗಮನ ಸೆಳೆಯುತ್ತಿದೆ. ಈ ಸಿನಿಮಾದಲ್ಲಿ ಧ್ರುವ ಸರ್ಜಾ ಅವರು ಕಾಳಿದಾಸ ಎಂಬ ಪಾತ್ರ ಮಾಡಿದ್ದಾರೆ. ಅದರ ಸಂಕ್ಷಿಪ್ತ ರೂಪವೇ ಕೆಡಿ. ಆದರೆ ಈ ಸಿನಿಮಾದಲ್ಲಿ ಕೇವಲ ಅವರು ಮಾತ್ರ ಕೆಡಿ ಅಲ್ಲ. ಇನ್ನೂ ಅನೇಕರು ಕೆಡಿಗಳು ಇದ್ದಾರೆ ಎಂದು ರಮೇಶ್ ಅರವಿಂದ್ ಹೇಳಿದ್ದಾರೆ. ‘ಕೆಡಿ’ ಸಿನಿಮಾದ ಟ್ರೇಲರ್ (KD Movie Trailer) ಬಿಡುಗಡೆಯ ವೇದಿಕೆಯಲ್ಲಿ ಅವರು ಆ ಬಗ್ಗೆ ಮಾತನಾಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ..

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More