Ravichandran: ಬೆಂಗಳೂರಿನಲ್ಲಿ ಕ್ರೇಜಿ ಸ್ಟಾರ್ ರವಿಚಂದ್ರನ್ ಭೇಟಿ ಆದ ನಾನಿ

Updated on: Mar 16, 2023 | 8:16 AM

ಬುಧವಾರ ಈ ಸಿನಿಮಾ ಪ್ರಚಾರಕ್ಕಾಗಿ ಬೆಂಗಳೂರಿಗೆ ಆಗಮಿಸಿದ್ದರು ನಾನಿ. ಈ ವೇಳೆ ನಾನಿ ಅವರು ಕ್ರೇಜಿ ಸ್ಟಾರ್ ರವಿಚಂದ್ರನ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ನಾನಿ ಅವರು ಸದ್ಯ ‘ದಸರಾ’ ಸಿನಿಮಾ (Dasara Movie) ಪ್ರಚಾರದಲ್ಲಿ ಬ್ಯುಸಿ ಆಗಿದ್ದಾರೆ. ವಿವಿಧ ನಗರಗಳಿಗೆ ತೆರಳಿ ಅವರು ಪ್ರಮೋಷನ್ ಮಾಡುತ್ತಿದ್ದಾರೆ. ಬುಧವಾರ (ಮಾರ್ಚ್​ 15) ಈ ಸಿನಿಮಾ ಪ್ರಚಾರಕ್ಕಾಗಿ ಬೆಂಗಳೂರಿಗೆ ಆಗಮಿಸಿದ್ದರು ನಾನಿ. ಈ ವೇಳೆ ನಾನಿ ಅವರು ಕ್ರೇಜಿ ಸ್ಟಾರ್ ರವಿಚಂದ್ರನ್ (Ravichandran) ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಮಾರ್ಚ್​ 30ರಂದು ದಸರಾ ರಿಲೀಸ್ ಆಗುತ್ತಿದೆ. ಕೀರ್ತಿ ಸುರೇಶ್ ಚಿತ್ರದಲ್ಲಿ ನಾಯಕಿ ಆಗಿ ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More