ಸಿಎಂ ಡಿಕೆ ಶಿವಕುಮಾರ್ ಭೇಟಿ ಮಾಡಿದ ನಟ ರವಿಚಂದ್ರನ್
ಕನ್ನಡದ ಜನಪ್ರಿಯ ನಟ ರವಿಚಂದ್ರನ್ ಅವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಈ ಭೇಟಿಯು ರಾಜಕೀಯ ವಲಯದಲ್ಲಿ ಮತ್ತು ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದ್ದು, ಡಿ.ಕೆ. ಶಿವಕುಮಾರ್ ಅವರ ನಿವಾಸದ ಸುತ್ತ ಜನರು ಸೇರಿದ್ದರು. ಇದರ ಮಧ್ಯೆಯೇ ಅವರು ಡಿಕೆಶಿಯನ್ನು ಭೇಟಿ ಮಾಡಿದ್ದಾರೆ.
ಕನ್ನಡ ಚಿತ್ರರಂಗದ ಜನಪ್ರಿಯ ನಟ ರವಿಚಂದ್ರನ್ ಅವರು ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಈ ಭೇಟಿ ತೀವ್ರ ಕುತೂಹಲ ಮೂಡಿಸಿದೆ. ಅವರು ಭೇಟಿ ನಡೆದಿದ್ದು ಏಕೆ ಎಂಬ ಪ್ರಶ್ನೆಗೆ ಇನ್ನಷ್ಟೇ ಉತ್ತರ ಸಿಗಬೇಕಿದೆ. ರವಿಚಂದ್ರನ್ ರಾಜಕೀಯದಲ್ಲಿ ಆ್ಯಕ್ಟಿವ್ ಆಗಿಲ್ಲ. ಹೀಗಾಗಿ, ಈ ಭೇಟಿ ಸಿನಿಮಾಗೆ ಸಂಬಂಧಿಸಿದ ವಿಷಯಕ್ಕೆ ನಡೆದಿರಬಹುದು ಎನ್ನಲಾಗುತ್ತಿದೆ. ರವಿಚಂದ್ರನ್ ಅವರು ಮರಳಿದ ಬಳಿಕ ಅಸಲಿ ವಿಷಯ ತಿಳಿಯಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published on: Aug 05, 2026 01:19 PM
Follow Us

