Rishab Shetty: ‘ಸಿದ್ದಶ್ರೀ ಪ್ರಶಸ್ತಿ’ ಮುಡಿಗೇರಿಸಿಕೊಂಡ ನಟ ರಿಷಬ್ ಶೆಟ್ಟಿ
ನಟ ರಿಷಬ್ ಶೆಟ್ಟಿ ಅವರನ್ನು ಪ್ರಶಸ್ತಿಗಳು ಹುಡುಕಿಕೊಂಡು ಬರುತ್ತಿದ್ದು, 'ಸಿದ್ದಶ್ರೀ ಪ್ರಶಸ್ತಿ'ಯನ್ನು ಮುಡಿಗೇರಿಸಿಕೊಂಡಿದ್ದಾರೆ.
ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿರುವ ‘ಕಾಂತಾರ’ (Kantara) ಚಿತ್ರ ಯಶಸ್ಸು ಗಳಿಸಿದೆ. ಸುಮಾರು 400 ಕೋಟಿ ರೂ. ಗಳಿಕೆ ಮಾಡಿದೆ. ಸದ್ಯ ನಟ ರಿಷಬ್ ಶೆಟ್ಟಿ (Rishab Shetty) ಅವರನ್ನು ಪ್ರಶಸ್ತಿಗಳು ಹುಡುಕಿಕೊಂಡು ಬರುತ್ತಿವೆ. ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಜಿಡಗಾ ಗ್ರಾಮದಲ್ಲಿರುವ ಸಿದ್ಧರಾಮ ಶಿವಯೋಗಿಗಗಳ ಪುಣ್ಯ ನೆಲದಲ್ಲಿ ‘ಸಿದ್ದಶ್ರೀ ಪ್ರಶಸ್ತಿ’ಯನ್ನು ರಿಷಬ್ ಶೆಟ್ಟಿ ತಮ್ಮ ಮುಡಿಗೇರಿಸಿಕೊಂಡಿದ್ದಾರೆ. 1 ಲಕ್ಷ ನಗದು, 20 ಗ್ರಾಂ ಸ್ವರ್ಣ ಪದಕವನ್ನು ಪ್ರಶಸ್ತಿ ಒಳಗೊಂಡಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Latest Videos