ಶಿವರಾಜ್‌ಕುಮಾರ್ ಆಗಮನ ವೇಳೆ ಪಟಾಕಿ ಸ್ಫೋಟ; ತಪ್ಪಿದ ದೊಡ್ಡ ಅಪಾಯ
ನಟ ಶಿವರಾಜ್‌ಕುಮಾರ್ ಆಗಮನದ ವೇಳೆ ದಿಢೀರನೆ ಪಟಾಕಿ ಸ್ಫೋಟಗೊಂಡ ಘಟನೆ ಚಿತ್ರದುರ್ಗದಲ್ಲಿ ಇಂದು (ಅಕ್ಟೋಬರ್ 5) ನಡೆದಿದೆ. ಶಿವಣ್ಣ ಅವರ ತೀರಾ ಹತ್ತಿರದಲ್ಲೇ ಇದ್ದಕ್ಕಿದ್ದಂತೆ ದೊಡ್ಡ ಮಟ್ಟದಲ್ಲಿ ಪಟಾಕಿ ಸ್ಫೋಟಗೊಂಡಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಅಪಾಯ ಸಂಭವಿಸದೇ ಶಿವಣ್ಣ ಸೇರಿದಂತೆ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ನಟ ಶಿವರಾಜ್‌ಕುಮಾರ್ ಅವರ ಆಗಮನದ ವೇಳೆ ದಿಢೀರನೆ ಪಟಾಕಿ ಸ್ಫೋಟಗೊಂಡ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಅಪಾಯ ಸಂಭವಿಸದೇ ಶಿವಣ್ಣ ಸೇರಿದಂತೆ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಿತ್ರದುರ್ಗ ನಗರದಲ್ಲಿ ಆಯೋಜಿಸಲಾಗಿದ್ದ ಖಾಸಗಿ ಶೋರೂಮ್ ಒಂದರ ಉದ್ಘಾಟನಾ ಕಾರ್ಯಕ್ರಮಕ್ಕೆ ಶಿವರಾಜ್‌ಕುಮಾರ್ ಆಗಮಿಸಿದ್ದರು. ಅವರು ಶೋರೂಮ್ ಪ್ರವೇಶಿಸುತ್ತಿದ್ದಂತೆಯೇ ಅಭಿಮಾನಿಗಳು ಹಾಗೂ ಸಂಘಟಕರು ಸಂಭ್ರಮದಿಂದ ಪಟಾಕಿ ಸಿಡಿಸಲು ಆರಂಭಿಸಿದ್ದಾರೆ. ಈ ವೇಳೆ ಶಿವಣ್ಣ ಅವರ ತೀರಾ ಹತ್ತಿರದಲ್ಲೇ ಇದ್ದಕ್ಕಿದ್ದಂತೆ ದೊಡ್ಡ ಮಟ್ಟದಲ್ಲಿ ಪಟಾಕಿ ಸ್ಫೋಟಗೊಂಡಿದೆ. ದಿಢೀರ್ ಪಟಾಕಿ ಸಿಡಿತದ ಭಾರಿ ಶಬ್ದಕ್ಕೆ ಶಿವರಾಜ್‌ಕುಮಾರ್ ಅವರು ಕೆಲ ಕ್ಷಣ ಆಘಾತಕ್ಕೆ ಒಳಗಾದರು. ಸ್ಥಳದಲ್ಲಿದ್ದ ಅಭಿಮಾನಿಗಳು ಹಾಗೂ ಭದ್ರತಾ ಸಿಬ್ಬಂದಿ ಕೂಡ ಕ್ಷಣಕಾಲ ಆತಂಕಗೊಂಡರು. ಆದರೆ, ತಕ್ಷಣವೇ ಸಂಯಮದಿಂದಲೇ ಶೋರೂಮ್ ಒಳಗೆ ತೆರಳಿದರು. ಶಿವಣ್ಣ ಅವರಿಗೆ ಯಾವುದೇ ಗಾಯಗಳಾಗದೆ ಸಂಪೂರ್ಣ ಸುರಕ್ಷಿತವಾಗಿದ್ದಾರೆ ಎಂದು ತಿಳಿದುಬಂದ ನಂತರ ಅಭಿಮಾನಿಗಳು ಹಾಗೂ ಸಂಘಟಕರು ನಿಟ್ಟುಸಿರು ಬಿಟ್ಟಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

