ಶಿವರಾಜ್‌ಕುಮಾರ್ ಆಗಮನ ವೇಳೆ ಪಟಾಕಿ ಸ್ಫೋಟ; ತಪ್ಪಿದ ದೊಡ್ಡ ಅಪಾಯ

Edited By:

Updated on: Oct 05, 2026 | 8:56 PM

ನಟ ಶಿವರಾಜ್‌ಕುಮಾರ್ ಆಗಮನದ ವೇಳೆ ದಿಢೀರನೆ ಪಟಾಕಿ ಸ್ಫೋಟಗೊಂಡ ಘಟನೆ ಚಿತ್ರದುರ್ಗದಲ್ಲಿ ಇಂದು (ಅಕ್ಟೋಬರ್ 5) ನಡೆದಿದೆ. ಶಿವಣ್ಣ ಅವರ ತೀರಾ ಹತ್ತಿರದಲ್ಲೇ ಇದ್ದಕ್ಕಿದ್ದಂತೆ ದೊಡ್ಡ ಮಟ್ಟದಲ್ಲಿ ಪಟಾಕಿ ಸ್ಫೋಟಗೊಂಡಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಅಪಾಯ ಸಂಭವಿಸದೇ ಶಿವಣ್ಣ ಸೇರಿದಂತೆ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ನಟ ಶಿವರಾಜ್‌ಕುಮಾರ್ ಅವರ ಆಗಮನದ ವೇಳೆ ದಿಢೀರನೆ ಪಟಾಕಿ ಸ್ಫೋಟಗೊಂಡ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಅಪಾಯ ಸಂಭವಿಸದೇ ಶಿವಣ್ಣ ಸೇರಿದಂತೆ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಿತ್ರದುರ್ಗ ನಗರದಲ್ಲಿ ಆಯೋಜಿಸಲಾಗಿದ್ದ ಖಾಸಗಿ ಶೋರೂಮ್ ಒಂದರ ಉದ್ಘಾಟನಾ ಕಾರ್ಯಕ್ರಮಕ್ಕೆ ಶಿವರಾಜ್‌‌ಕುಮಾರ್ ಆಗಮಿಸಿದ್ದರು. ಅವರು ಶೋರೂಮ್‌ ಪ್ರವೇಶಿಸುತ್ತಿದ್ದಂತೆಯೇ ಅಭಿಮಾನಿಗಳು ಹಾಗೂ ಸಂಘಟಕರು ಸಂಭ್ರಮದಿಂದ ಪಟಾಕಿ ಸಿಡಿಸಲು ಆರಂಭಿಸಿದ್ದಾರೆ. ಈ ವೇಳೆ ಶಿವಣ್ಣ ಅವರ ತೀರಾ ಹತ್ತಿರದಲ್ಲೇ ಇದ್ದಕ್ಕಿದ್ದಂತೆ ದೊಡ್ಡ ಮಟ್ಟದಲ್ಲಿ ಪಟಾಕಿ ಸ್ಫೋಟಗೊಂಡಿದೆ. ದಿಢೀರ್ ಪಟಾಕಿ ಸಿಡಿತದ ಭಾರಿ ಶಬ್ದಕ್ಕೆ ಶಿವರಾಜ್‌ಕುಮಾರ್ ಅವರು ಕೆಲ ಕ್ಷಣ ಆಘಾತಕ್ಕೆ ಒಳಗಾದರು. ಸ್ಥಳದಲ್ಲಿದ್ದ ಅಭಿಮಾನಿಗಳು ಹಾಗೂ ಭದ್ರತಾ ಸಿಬ್ಬಂದಿ ಕೂಡ ಕ್ಷಣಕಾಲ ಆತಂಕಗೊಂಡರು. ಆದರೆ, ತಕ್ಷಣವೇ ಸಂಯಮದಿಂದಲೇ ಶೋರೂಮ್ ಒಳಗೆ ತೆರಳಿದರು. ಶಿವಣ್ಣ ಅವರಿಗೆ ಯಾವುದೇ ಗಾಯಗಳಾಗದೆ ಸಂಪೂರ್ಣ ಸುರಕ್ಷಿತವಾಗಿದ್ದಾರೆ ಎಂದು ತಿಳಿದುಬಂದ ನಂತರ ಅಭಿಮಾನಿಗಳು ಹಾಗೂ ಸಂಘಟಕರು ನಿಟ್ಟುಸಿರು ಬಿಟ್ಟಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಬಸವರಾಜ ಮುದನೂರ್

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More