ಶಿವರಾಮ್ ಪಾರ್ಥಿವ ಶರೀರಕ್ಕೆ ಕುಟುಂಬದವರ ನಮನ; ಅಂತಿಮ ದರ್ಶನಕ್ಕೆ ವ್ಯವಸ್ಥೆ ಎಲ್ಲಿ?

Updated on: Mar 01, 2024 | 10:05 AM

ಶಿವರಾಮ್ ಅವರ ರಾಜಾಜಿನಗರದಲ್ಲಿ ಇರುವ ಮನೆಯಲ್ಲಿ ಪಾರ್ಥಿವ ಶರೀರ ಇಡಲಾಗಿದೆ. ಇವರಿಗೆ ಸಂಬಂಧಿಕರು ಹಾಗೂ ಕುಟುಂಬದವರು ಅಂತಿಮ ನಮನ ಸಲ್ಲಿಸುತ್ತಿದ್ದಾರೆ. ಬೆಳಿಗ್ಗೆ 9 ಗಂಟೆ ವೇಳೆಗೆ ಪಾರ್ಥಿವ ಶರೀರ ಟೌನ್​ಹಾಲ್ ಬಳಿ ಇರುವ ರವೀಂದ್ರ ಕಲಾಕ್ಷೇತ್ರಕ್ಕೆ ಶಿಫ್ಟ್ ಮಾಡಲಾಗುತ್ತಿದೆ. ಗಣ್ಯರು, ಕಲಾವಿದರು ಹಾಗೂ ಅಭಿಮಾನಿಗಳಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ನಟ ಶಿವರಾಮ್ (Shivaram) ಅವರು ಫೆಬ್ರವರಿ 29ರಂದು ನಿಧನ ಹೊಂದಿದರು. ಐಎಎಸ್ ಅಧಿಕಾರಿಯಾಗಿ, ರಾಜಕಾರಣಿಯಾಗಿ, ನಟನಾಗಿ ಅವರು ಗುರುತಿಸಿಕೊಂಡಿದ್ದರು. ಅವರು ಅಪಾರ ಅಭಿಮಾನಿ ಬಳಗವನ್ನು ಹೊಂದಿದ್ದರು. ಶಿವರಾಮ್ ಅವರ ರಾಜಾಜಿನಗರದಲ್ಲಿ ಇರುವ ಮನೆಯಲ್ಲಿ ಪಾರ್ಥಿವ ಶರೀರ ಇಡಲಾಗಿದೆ. ಇವರಿಗೆ ಸಂಬಂಧಿಕರು ಹಾಗೂ ಕುಟುಂಬದವರು ಅಂತಿಮ ನಮನ ಸಲ್ಲಿಸುತ್ತಿದ್ದಾರೆ. ಬೆಳಿಗ್ಗೆ 9 ಗಂಟೆ ವೇಳೆಗೆ ಪಾರ್ಥಿವ ಶರೀರ ಟೌನ್​ಹಾಲ್ ಬಳಿ ಇರುವ ರವೀಂದ್ರ ಕಲಾಕ್ಷೇತ್ರಕ್ಕೆ ಶಿಫ್ಟ್ ಮಾಡಲಾಗುತ್ತಿದೆ. ಗಣ್ಯರು, ಕಲಾವಿದರು ಹಾಗೂ ಅಭಿಮಾನಿಗಳಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಶಿವರಾಮ್ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಎಲ್ಲರೂ ಕೋರಿಕೊಂಡಿದ್ದಾರೆ. ಸಿನಿಮಾಗಳಲ್ಲಿ ನಟನಾಗಿ ಮಿಂಚಿದ ಏಕೈಕ ಐಎಎಸ್ ಅಧಿಕಾರಿ ಎನ್ನುವ ಖ್ಯಾತಿ ಅವರಿಗೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published on: Mar 01, 2024 08:27 AM
Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More