ನಟ ಸುದೀಪ್ ಹೆಲಿಕಾಪ್ಟರ್ ಲ್ಯಾಂಡಿಂಗ್ನಲ್ಲಿ ಗೊಂದಲ: ಆಗಿದ್ದೇನು?
ಸಿಂಧನೂರಿನಲ್ಲಿ ನಡೆದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಕಿಚ್ಚ ಸುದೀಪ್ , ಡಿಸಿಎಂ ಡಿಕೆ ಶಿವಕುಮಾರ್, ಸಚಿವ ಈಶ್ವರ್ ಖಂಡ್ರೆ ಸೇರಿದಂತೆ ಇತರೆ ನಾಯಕರು ಭಾಗವಹಿಸಿದ್ದು, ನವದಂಪತಿಗಳಿಗೆ ಶುಭ ಹಾರೈಸಿದರು. ಆದ್ರೆ, ಸುದೀಪ್ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲವಾಗಿದ್ದು, ಡಿಸಿಎಂ ಡಿಕೆ ಶಿವಕುಮಾರ್ ಹೆಲಿಕಾಪ್ಟರ್ ಲ್ಯಾಂಡಿಂಗ್ಗೆ ನಿಗದಿಯಾಗಿದ್ದ ಹೆಲಿಪ್ಯಾಡ್ ನಲ್ಲಿ ಸುದೀಪ್ ಹೆಲಿಕಾಪ್ಟರ್ ಲ್ಯಾಂಡ್ ಆಗಿರುವ ಘಟನೆ ನಡೆದಿದೆ.
ರಾಯಚೂರು, (ಮೇ 03): ಜಿಲ್ಲೆಯ ಸಿಂಧನೂರಿನಲ್ಲಿ ನಡೆದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಕಿಚ್ಚ ಸುದೀಪ್(actor sudeep) , ಡಿಸಿಎಂ ಡಿಕೆ ಶಿವಕುಮಾರ್, ಸಚಿವ ಈಶ್ವರ್ ಖಂಡ್ರೆ ಸೇರಿದಂತೆ ಇತರೆ ನಾಯಕರು ಭಾಗವಹಿಸಿದ್ದು, ನವದಂಪತಿಗಳಿಗೆ ಶುಭ ಹಾರೈಸಿದರು. ಆದ್ರೆ, ಸುದೀಪ್ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲವಾಗಿದ್ದು, ಡಿಸಿಎಂ ಡಿಕೆ ಶಿವಕುಮಾರ್ ಹೆಲಿಕಾಪ್ಟರ್ ಲ್ಯಾಂಡಿಂಗ್ಗೆ ನಿಗದಿಯಾಗಿದ್ದ ಹೆಲಿಪ್ಯಾಡ್ ನಲ್ಲಿ ಸುದೀಪ್ ಹೆಲಿಕಾಪ್ಟರ್ ಲ್ಯಾಂಡ್ ಆಗಿರುವ ಘಟನೆ ನಡೆದಿದೆ.
ಸಿಂಧನೂರು ನಗರದ ಸರ್ಕಾರಿ ಕಾಲೇಜಿನಲ್ಲಿ ಡಿಸಿಎಂ, ನಟ ಸುದೀಪ್ ಸೇರಿ 3 ಪ್ರತ್ಯೇಕ ಹೆಲಿಪ್ಯಾಡ್ ನಿರ್ಮಿಸಲಾಗಿತ್ತು. ಆದ್ರೆ, ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ಮೊದಲು ಬಂದ ನಟ ಸುದೀಪ್ ಇದ್ದ ಹೆಲಿಕಾಪ್ಟರ್, ಡಿಸಿಎಂಗೆ ನಿಗದಿಯಾಗಿದ್ದ ಸ್ಥಳದಲ್ಲಿ ಲ್ಯಾಂಡ್ ಆಗಿದೆ. ಬಳಿಕ ಎಚ್ಚೆತ್ತ ಪೊಲೀಸರು, ಹೆಲಿಕಾಪ್ಟರ್ ರೀ ಲ್ಯಾಂಡಿಂಗ್ ಮಾಡುವಂತೆ ಸೂಚನೆ ನೀಡಿದ್ದಾರೆ. ಹೀಗಾಗಿ ತಮಗೆ ನಿಗದಿಪಡಿಸಿದ್ದ ಹೆಲಿಪ್ಯಾಡ್ನಲ್ಲಿ ಸುದೀಪ್ ಹೆಲಿಕಾಪ್ಟರ್ ರೀ ಲ್ಯಾಂಡಿಂಗ್ ಮಾಡಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
ಜಾರ್ಖಂಡ್ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ;ರಾಹುಲ್ ಗಾಂಧಿ
ಆಸ್ಪತ್ರೆಯಲ್ಲಿ ಚೆನ್ನಮ್ಮರ ಕೊನೆ ಕ್ಷಣಗಳನ್ನ ಹೇಳಿ ಗದ್ಗದಿತರಾದ ದೇವೇಗೌಡ್ರು
‘ಯಶ್ ಈಗ ರಾಜ್ಯ, ದೇಶ ಗೆದ್ದಾಗಿದೆ, ವಿಶ್ವವನ್ನೂ ಗೆಲ್ತಾರೆ’; ಅಜಯ್ ರಾವ್

