AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆ ಕಾಲದಲ್ಲೇ ಹಿಂದಿಯವರು ಅನಂತ್ ನಾಗ್ ಬಗ್ಗೆ ಮಾತಾಡುತ್ತಿದ್ದರು: ಉಪೇಂದ್ರ

ಆ ಕಾಲದಲ್ಲೇ ಹಿಂದಿಯವರು ಅನಂತ್ ನಾಗ್ ಬಗ್ಗೆ ಮಾತಾಡುತ್ತಿದ್ದರು: ಉಪೇಂದ್ರ

ಮದನ್​ ಕುಮಾರ್​
|

Updated on: Sep 18, 2026 | 5:56 PM

Share

ಅನಂತ್ ನಾಗ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ ಆಗಿದೆ. ಆ ಬಗ್ಗೆ ಉಪೇಂದ್ರ ಅವರು ಮಾತನಾಡಿದ್ದಾರೆ. ಇಂದು (ಸೆಪ್ಟೆಂಬರ್ 18) ಉಪೇಂದ್ರ ಅವರ ಹುಟ್ಟುಹಬ್ಬದ ಪ್ರಯುಕ್ತ ಸುದ್ದಿಗೋಷ್ಠಿ ನಡೆಸಲಾಯಿತು. ಈ ವೇಳೆ ಮಾತನಾಡುವಾಗ ಅನಂತ್ ನಾಗ್ ಅವರಿಗೆ ಉಪೇಂದ್ರ ಅಭಿನಂದನೆ ಸಲ್ಲಿಸಿದರು.

ಹಿರಿಯ ನಟ ಅನಂತ್ ನಾಗ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ ಆಗಿದೆ. ಆ ಬಗ್ಗೆ ನಟ ಉಪೇಂದ್ರ ಅವರು ಮಾತನಾಡಿದ್ದಾರೆ. ಇಂದು (ಸೆ.18) ಉಪೇಂದ್ರ ಅವರ ಹುಟ್ಟುಹಬ್ಬದ ಪ್ರಯುಕ್ತ ಸುದ್ದಿಗೋಷ್ಠಿ ನಡೆಸಲಾಯಿತು. ಈ ವೇಳೆ ಮಾತನಾಡುವಾಗ ಅನಂತ್ ನಾಗ್ ಅವರಿಗೆ ಉಪೇಂದ್ರ ಅಭಿನಂದನೆ ಸಲ್ಲಿಸಿದರು. ‘ಅವರು ಎಂಥಾ ಅದ್ಭುತವಾದ ನಟ ಎಂಬುದು ನಿಮಗೆಲ್ಲರಿಗೂ ಗೊತ್ತು. ಚೇರ್​ನಲ್ಲಿ ಕುಳಿತು ನೋಡುವ ಎಲ್ಲರಿಗೂ ನಾವೇ ಅಲ್ಲಿ ಇದ್ದೇವೆ ಅನಿಸುವಂತಹ ಹೀರೋ ಅವರು. ಅನಂತ್ ನಾಗ್ ಎಂಥಾ ಕಲಾವಿದ ಎಂಬುದನ್ನು ಆ ಕಾಲದಲ್ಲೇ ಹಿಂದಿ ಚಿತ್ರರಂಗದವರು ಮಾತನಾಡುತ್ತಿದ್ದರು. ಇಷ್ಟು ವರ್ಷಗಳ ಬಳಿಕ ಈ ಪುರಸ್ಕಾರ ಸಿಕ್ಕಿರುವುದು ಎಲ್ಲ ಕನ್ನಡಿಗರಿಗೂ ಒಂದು ಹೆಮ್ಮೆ. ಅವರಿಗೆ ಹಾಗೂ ಅವರ ಕುಟುಂಬಕ್ಕೆ ನಾನು ಅಭಿನಂದನೆ ತಿಳಿಸುತ್ತೇನೆ’ ಎಂದು ಉಪೇಂದ್ರ ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More