ಸ್ಪಂದನಾ ಮೃತದೇಹದ ಮರಣೋತ್ತರ ಪರೀಕ್ಷೆ ಮುಕ್ತಾಯ, ಪಾರ್ಥಿವ ಶರೀರ ಬೆಂಗಳೂರಿಗೆ ಯಾವಾಗ? ಇಲ್ಲಿದೆ ವಿವರ
ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಥೈಲ್ಯಾಂಡ್ ಪ್ರವಾಸದಲ್ಲಿದ್ದಾಗಲೇ ಹೃದಯಾಘಾತಕ್ಕೊಳಗಾಗಿ ಸಾವನಪ್ಪಿದ್ದಾರೆ. ಇದೀಗ ಅಲ್ಲಿಯೇ ಮರಣೋತ್ತರ ಪರೀಕ್ಷೆ ಮಾಡಲಾಗಿದ್ದು ಇಂದು ರಾತ್ರಿ ಪಾರ್ಥಿವ ಶರೀರ ಬೆಂಗಳೂರಿಗೆ ಆಗಮಿಸಲಿದೆ.
ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ (spandana vijay raghavendra,) ಬಾರದ ಲೋಕಕ್ಕೆ ತೆರಳಿದ್ದಾರೆ. ಥೈಲ್ಯಾಂಡ್ ಪ್ರವಾಸದಲ್ಲಿದ್ದಾಗಲೇ ಹೃದಯಾಘಾತಕ್ಕೊಳಗಾಗಿ ಸಾವನಪ್ಪಿದ್ದಾರೆ. ಮೂಲಗಳ ಪ್ರಕಾರ ಈಗಾಗಲೇ ಥೈಲ್ಯಾಂಡ್ನಲ್ಲೇ ಸ್ಪಂದನಾ ಮೃತದೇಹದ ಮರಣೋತ್ತರ ಪರೀಕ್ಷೆ ಮುಕ್ತಾಯವಾಗಿದೆ. ಹೃದಯಘಾತವಾದಾಗ ಸ್ಪಂದನಾ ಅವರನ್ನು ಬ್ಯಾಂಕಾಕ್ ನ ಕಿಂಗ್ ಚುಲಾಲಾಂಗ್‌ಕಾರ್ನ್ ಮೆಮೋರಿಯಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೀಗಾಗಿ ಅಲ್ಲಿಯೇ ಮರಣೋತ್ತರ ಪರೀಕ್ಷೆ ಮಾಡಲಾಗಿದ್ದು, ಇಂದು (ಆಗಸ್ಟ್ 08) ಮಧ್ಯಾಹ್ನದ ವೇಳೆಗೆ ಕಸ್ಟಮ್ಸ್ ಕ್ಲಿಯರೆನ್ಸ್ ಬಳಿಕ ಸ್ಪಂದನಾ ಮೃತದೇಹ ಹಸ್ತಾಂತರವಾಗಲಿದೆ. ನಂತರ ಸಂಜೆ 7 ಗಂಟೆಗೆ ಥಾಯ್ಲೆಂಡ್ನಿಂದ ಸ್ಪಂದನಾ ಪಾರ್ಥಿವ ಶರೀರ ರವಾನೆಯಾಗಲಿದ್ದು, ರಾತ್ರಿ 1 ಗಂಟೆಗೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರಲಿದೆ ಎಂದು ತಿಳಿದುಬಂದಿದೆ.
ಇನ್ನಷ್ಟು ವಿಡಿಯೋ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ