AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್

ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್

ಮದನ್​ ಕುಮಾರ್​
|

Updated on: Mar 01, 2026 | 2:46 PM

Share

ಮೈಸೂರಿನಲ್ಲಿ ನಡೆದ ಡ್ರಗ್ಸ್ ವಿರೋಧಿ ಜಾಗೃತಿ ಮ್ಯಾರಥಾನ್​ನಲ್ಲಿ ನಟ ವಿನಯ್ ರಾಜ್​ಕುಮಾರ್ ಅವರು ಭಾಗಿಯಾಗಿದ್ದಾರೆ. ಈ ವೇಳೆ ಅವರು ಮಾಧ್ಯಮ ಪ್ರತಿನಿಧಿಗಳ ಜತೆ ಮಾತಾಡಿದರು. ‘ಇದರಲ್ಲಿ ಭಾಗವಹಿಸಿದ್ದಕ್ಕೆ ಖುಷಿ ಆಗುತ್ತಿದೆ’ ಎಂದು ಅವರು ಹೇಳಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ ನೋಡಿ..

ನಟ ವಿನಯ್ ರಾಜ್​ಕುಮಾರ್ (Vinay Rajkumar) ಅವರು ಮೈಸೂರಿನಲ್ಲಿ ನಡೆದ ಡ್ರಗ್ಸ್ ವಿರೋಧಿ ಜಾಗೃತಿ ಮ್ಯಾರಥಾನ್​ನಲ್ಲಿ ಭಾಗಿಯಾಗಿದ್ದಾರೆ. ಈ ವೇಳೆ ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ‘ಇದರಲ್ಲಿ ಭಾಗವಹಿಸಿದ್ದಕ್ಕೆ ಖುಷಿ ಆಗುತ್ತಿದೆ. ನಮ್ಮ ಪೊಲೀಸ್, ನಮ್ಮ ಹೆಮ್ಮೆ ಎಂಬ ಟ್ಯಾಗ್ ಲೈನ್ ಕೇಳಲು ಬಹಳ ಖುಷಿ ಆಗುತ್ತಿದೆ’ ಎಂದು ಅವರು ಹೇಳಿದ್ದಾರೆ. ‘ಇತ್ತೀಚೆಗೆ ಮೈಸೂರಲ್ಲಿ ಪೊಲೀಸರು ದೊಡ್ಡ ಡ್ರಗ್ಸ್ (Drugs) ಜಾಲ ಪತ್ತೆ ಮಾಡಿದ್ದಾರೆ. ಅದಕ್ಕೆ ಅವರಿಗೆ ಅಭಿನಂದನೆ ತಿಳಿಸುತ್ತೇನೆ. ಕೆಲವರು ಮನರಂಜನೆಗೆ, ಕೆಲವರು ನೋವಿಗೆ ಡ್ರಗ್ಸ್ ಸೇವಿಸುತ್ತಾರೆ. ಅಂಥವರನ್ನು ರಿಹ್ಯಾಬ್ ಸೆಂಟರ್​​ಗೆ ಕಳಿಸಬೇಕು’ ಎಂದಿದ್ದಾರೆ ವಿನಯ್ ರಾಜ್​ಕುಮಾರ್.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us