‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ

Updated on: Jun 24, 2026 | 9:37 AM

Vinod Prabhakar health: ವಿನೋದ್ ಪ್ರಭಾಕರ್ ಅವರು ಇತ್ತೀಚೆಗೆ ಸಾಕಷ್ಟು ಸುದ್ದಿಯಲ್ಲಿ ಇದ್ದಾರೆ. ಅವರ ‘ಬಲರಾಮನ ದಿನಗಳು’ ಸಿನಿಮಾ ರಿಲೀಸ್ ವೇಳೆ ಅವರಿಗೆ ಅನಾರೋಗ್ಯ ಕಾಡುತ್ತಿದೆ. ಈಗ ವಿನೋದ್ ಆರೋಗ್ಯದ ಬಗ್ಗೆ ನಿರ್ದೇಶಕರು ಸ್ಪಷ್ಟನೆ ನೀಡಿದ್ದಾರೆ. ‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’ ಎಂದು ವಿನೋದ್ ಪ್ರಭಾಕರ್ ಹೇಳಿದ್ದಾರೆ.

ವಿನೋದ್ ಪ್ರಭಾಕರ್ ಅವರಿಗೆ ಇತ್ತೀಚೆಗೆ ಅನಾರೋಗ್ಯ ಕಾಡಿತ್ತು. ಬಿಪಿ ಏರಿಳಿತದಿಂದ ಈ ರೀತಿ ಆಗಿತ್ತು. ಅವರ ನಟನೆಯ ‘ಬಲರಾಮನ ದಿನಗಳು’ ಸಿನಿಮಾ ರಿಲೀಸ್ ಸಂದರ್ಭದಲ್ಲೇ ಈ ರೀತಿ ಆಗಿದ್ದು ಸಾಕಷ್ಟು ಚರ್ಚೆ ಹುಟ್ಟುಹಾಕಿತ್ತು. ‘ಇದು ಸಿನಿಮಾ ಪ್ರಚಾರದ ಗಿಮಿಕ್’ ಎಂದು ಕೆಲವರು ಹೇಳಿದ್ದರು. ಈ ಬಗ್ಗೆ ನಿರ್ದೇಶಕ ‘ಬಲರಾಮನ ದಿನಗಳು’ ಚಿತ್ರದ ನಿರ್ದೇಶಕ ಕೆಎಂ ಚೈತನ್ಯ ಮಾತನಾಡಿದ್ದಾರೆ. ‘ವಿನೋದ್ ಗಟ್ಟಿ ಮುಟ್ಟಾಗಿದ್ದಾರೆ. ಅವರಿಗೆ ಅನಾರೋಗ್ಯ ಆದರೆ, ಚಿತ್ರಕ್ಕೆ ಹೇಗೆ ಸಹಕಾರಿ ಆಗುತ್ತದೆ ನೀವೇ ಹೇಳಿ? ನಾವು ಆ ರೀತಿ ಗಿಮಿಕ್ ಮಾಡಿಲ್ಲ’ ಎಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ಹೆಗಡೆ ದುಗ್ಗುಮನೆ

ರಾಜೇಶ್ ಹೆಗಡೆ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More