AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್

ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್

ಮದನ್​ ಕುಮಾರ್​
|

Updated on: Apr 09, 2026 | 8:33 PM

Share

ದಿನಸಿ ಕಿಟ್ ವಿತರಣೆ ಮಾಡುವ ಮೂಲಕ ವಿನೋದ್ ರಾಜ್ ಅವರು ಮಾನವೀಯತೆ ಮೆರೆದಿದ್ದಾರೆ. ‘ತಾಯಿ ಇದ್ದಿದ್ದರೆ ಇದಕ್ಕಿಂತಲೂ ದೊಡ್ಡ ಸಹಾಯ ಮಾಡುತ್ತಿದ್ದರು. ನನ್ನ ಕೈಯಲ್ಲಿ ಆಗಿದ್ದನ್ನು ಮಾಡಿದ್ದೇನೆ’ ಎಂದು ಅವರು ಈ ವೇಳೆ ಹೇಳಿದರು. ತಮ್ಮ ನೆರವಿಗೆ ಬಂದ ವಿನೋದ್ ರಾಜ್ ಅವರಿಗೆ ಆಟೋ ಚಾಲಕರು ಧನ್ಯವಾದ ತಿಳಿಸಿದರು.

ಇರಾನ್ ಯುದ್ಧದ ಪರಿಣಾಮದಿಂದಾಗಿ ಎಲ್​ಪಿಜಿ (LPG) ಅಭಾವ ಉಂಟಾಗಿದೆ. ಆಟೋ ಚಾಲಕರು ಗ್ಯಾಸ್ ಇಲ್ಲದೇ ಪರದಾಡುವಂತಾಗಿದೆ. ಹಾಗಾಗಿ ನಟ ವಿನೋದ್ ರಾಜ್ ಅವರು ಆಟೋ ಚಾಲಕರ ನೆರವಿಗೆ ಬಂದಿದ್ದಾರೆ. ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯಲ್ಲಿ ತಾಯಿ, ನಟಿ ಲೀಲಾವತಿ ಸಮಾಧಿ ಬಳಿ ದಿನಸಿ ಕಿಟ್ ವಿತರಣೆ ಮಾಡಿದ್ದಾರೆ. ನೂರಾರು ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಲಾಗಿದೆ. ತಾಯಿಯ ಹೆಸರಿನಲ್ಲಿ ವಿನೋದ್ ರಾಜ್ (Vinod Raj) ಅವರು ಈ ಕಾರ್ಯ ಮಾಡಿದ್ದಾರೆ. ಈ ವೇಳೆ ಆಟೋ ಚಾಲಕರಿಗೆ ಅವರು ಊಟ ಹಾಕಿಸಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ.

ವರದಿ: ಮಂಜುನಾಥ್, ನೆಲಮಂಗಲ

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More