AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಲಮಂಗಲದ ಲೀಲಾವತಿ ಆಸ್ಪತ್ರೆಯಲ್ಲಿ ಸಿಬ್ಬಂದಿ ಕೊರತೆ ಬಗ್ಗೆ ನಟ ವಿನೋದ್ ರಾಜ್ ಬೇಸರ

ನೆಲಮಂಗಲದ ಲೀಲಾವತಿ ಆಸ್ಪತ್ರೆಯಲ್ಲಿ ಸಿಬ್ಬಂದಿ ಕೊರತೆ ಬಗ್ಗೆ ನಟ ವಿನೋದ್ ರಾಜ್ ಬೇಸರ

ಮಂಜುನಾಥ ಎಚ್​. ವಿ.
| Edited By: |

Updated on: Nov 12, 2026 | 10:17 PM

Share

ನೆಲಮಂಗಲದ ಸೋಲದೇವನಹಳ್ಳಿಯಲ್ಲಿರುವ ಲೀಲಾವತಿ ಆಸ್ಪತ್ರೆಯಲ್ಲಿ ತೀವ್ರ ಸಿಬ್ಬಂದಿ ಕೊರತೆ ಎದುರಾಗಿದೆ. ಕೇವಲ ಓರ್ವ ವೈದ್ಯರಿಂದ 10 ಹಳ್ಳಿಗಳ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಲ್ಯಾಬ್ ಟೆಕ್ನಿಷಿಯನ್, ಡಿ-ಗ್ರೂಪ್ ಸಿಬ್ಬಂದಿ, ಸಹಾಯಕರಿಲ್ಲದೆ ರೋಗಿಗಳು ಪರದಾಡುತ್ತಿದ್ದಾರೆ. ಹಿರಿಯ ನಟಿ ಲೀಲಾವತಿ ಪುತ್ರ ವಿನೋದ್ ರಾಜ್, ಆರೋಗ್ಯ ಅಧಿಕಾರಿಗಳ ನಡೆಗೆ ಬೇಸರ ವ್ಯಕ್ತಪಡಿಸಿ, ಸಿಬ್ಬಂದಿ ನಿಯೋಜನೆಗೆ ಆರೋಗ್ಯ ಸಚಿವ ಯು.ಟಿ. ಖಾದರ್‌ಗೆ ಮನವಿ ಸಲ್ಲಿಸಿದ್ದಾರೆ.

ನೆಲಮಂಗಲ, ನವೆಂಬರ್​​ 13: ತಾಲೂಕಿನ ಸೋಲದೇವನಹಳ್ಳಿಯಲ್ಲಿರುವ ಡಾ. ಎಂ. ಲೀಲಾವತಿ ಅವರ ಹೆಸರಿನಲ್ಲಿ ನಿರ್ಮಿಸಲಾದ ಪ್ರಾಥಮಿಕ ಆರೋಗ್ಯ ಕೇಂದ್ರವು ತೀವ್ರ ಸಿಬ್ಬಂದಿ ಕೊರತೆಯನ್ನು ಎದುರಿಸುತ್ತಿದ್ದು, ಆರೋಗ್ಯಾಧಿಕಾರಿಗಳ ನಡೆಗೆ ನಟ ವಿನೋದ್ ರಾಜ್ ಬೇಸರ ವ್ಯಕ್ತಪಡಿಸಿದ್ದಾರೆ. ಹಿರಿಯ ನಟಿ ಡಾ.ಎಂ.ಲೀಲಾವತಿ ಹೆಸರಿನಲ್ಲಿ ಸುಸಜ್ಜಿತ ಆಸ್ಪತ್ರೆ ನಿರ್ಮಾಣ ಮಾಡಿ ಸರ್ಕಾರಕ್ಕೆ ಹಸ್ತಾಂತರಿಸಿದ್ದರೂ, ಕೇವಲ ಓರ್ವ ಮಹಿಳಾ ವೈದ್ಯರು ಪ್ರತಿನಿತ್ಯ 50-100 ಜನ ರೋಗಿಗಳಿಗೆ ಚಿಕಿತ್ಸೆ ನೀಡಬೇಕಿದೆ. ಡಿ ಗ್ರೂಪ್, ಸಹಾಯಕ, ಲ್ಯಾಬ್ ಟೆಕ್ನಿಶನ್ ಇಲ್ಲದೆ ಪರದಾಟ ನಡೆಸಬೇಕಾದ ಸ್ಥಿತಿ ಇದ್ದು, ಡಿ ಗ್ರೂಪ್ ಸಿಬ್ಬಂದಿ ನಿಯೋಜನೆ ಮಾಡಿ ಅಧಿಕಾರಿಗಳು ಮತ್ತೆ ವಾಪಸ್ ಪಡೆದಿರುವ ಬಗ್ಗೆ ವಿನೋದ್ ರಾಜ್ ಬೇಸರ ಹೊರಹಾಕಿದ್ದಾರೆ. ಸೂಕ್ತ ಸಿಬ್ಬಂದಿಗಳನ್ನ ನಿಯೋಜನೆ ಮಾಡುವ ಮೂಲಕ ಗ್ರಾಮೀಣ ಪ್ರದೇಶದ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಿ. ಚಿಕಿತ್ಸೆಗೆ ಬೇಕಾದ ಔಷಧಿಗಳನ್ನ ಒದಗಿಸಿ ಎಂದು ಆರೋಗ್ಯ ಸಚಿವ ಯುಟಿ ಖಾದರ್​​ಗೆ ಅವರು ಮನವಿ ಮಾಡಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಮಂಜುನಾಥ ಎಚ್​. ವಿ.
ಮಂಜುನಾಥ ಎಚ್​. ವಿ.

ಮಂಜುನಾಥ ಹೆಚ್ ವಿ. ಇವರು ಹುಟ್ಟಿದ್ದು ಬೆಂಗಳೂರು ಉತ್ತರ ತಾಲೂಕಿನ ಹೆಸರಘಟ್ಟದಲ್ಲಿ. ಬೆಂಗಳೂರು ಸೆಂಟ್ರಲ್ ಕಾಲೇಜಿನಲ್ಲಿ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪಡೆದಿದ್ದಾರೆ. ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದರು. 8 ವರ್ಷಗಳ ಕಾಲ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿದ್ದಾರೆ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಆಗಿ ವೃತ್ತಿ ನಿರ್ವಹಿಸಿದ್ದು ಸಾಮಾಜಿಕವಾಗಿ ನ್ಯಾಯ ಒದಗಿಸುವ ಕೆಲಸವನ್ನ ಮಾಡಿದ್ದಾರೆ. ಕಳೆದ 9 ವರ್ಷಗಳಿಂದ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಟಿವಿ9 ಕನ್ನಡ ಸಂಸ್ಥೆಗೆ ಬೆಂಗಳೂರು ಹಾಗೂ ನೆಲಮಂಗಲ ಭಾಗದ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕ್ರಿಕೆಟ್ ಆಡುವುದು, ಕ್ರೈಂ ಇನ್ವೆಷ್ಟಿಗೇಷನ್, ಬುಕ್ ಹಾಗೂ ಪೇಪರ್ ಓದುವ ಹವ್ಯಾಸವಿದೆ.

Read More