ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆ ಗುಂಡಿ ಮುಚ್ಚಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾದ ನಟ ವಿನೋದ್ ರಾಜ್
ವಾಹನ ಸವಾರರ ಜೀವ ಹಾಗೂ ಸುರಕ್ಷತೆಯ ದೃಷ್ಟಿಯಿಂದ ಮುಂದಾದ ನಟ ವಿನೋದ್ ರಾಜ್, ರಸ್ತೆಯ ಗುಂಡಿಗಳಿಗೆ ಸಿಮೆಂಟ್ ಮಿಶ್ರಿತ ಕಾಂಕ್ರೀಟ್ ಹಾಕಿ ಮುಚ್ಚುವ ಕೆಲಸವನ್ನು ತಾವೇ ನಿಂತು ನೆರವೇರಿಸಿದ್ದಾರೆ. ಸಾರ್ವಜನಿಕರ ಕಷ್ಟಕ್ಕೆ ಧ್ವನಿಯಾಗಿ, ಸ್ವತಃ ಶ್ರಮದಾನ ಮಾಡಿ ರಸ್ತೆ ಸರಿಪಡಿಸಿದ ನಟನ ಈ ಸಾಮಾಜಿಕ ಕಳಕಳಿ ಮತ್ತು ಮಾನವೀಯ ಕಾರ್ಯಕ್ಕೆ ವಾಹನ ಸವಾರರು ಹಾಗೂ ಸಾರ್ವಜನಿಕರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ನೆಲಮಂಗಲದಿಂದ ದೊಡ್ಡಬಳ್ಳಾಪುರಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ ಸಂಪೂರ್ಣವಾಗಿ ಹಾಳಾಗಿದ್ದು, ರಸ್ತೆ ತುಂಬಾ ಬಿದ್ದಿದ್ದ ದೊಡ್ಡ ದೊಡ್ಡ ಗುಂಡಿಗಳಿಂದಾಗಿ ವಾಹನ ಸವಾರರು ಪ್ರತಿನಿತ್ಯ ಪರದಾಡುವಂತಾಗಿತ್ತು. ಸಾರ್ವಜನಿಕರ ಈ ಸಮಸ್ಯೆಗೆ ತಕ್ಷಣವೇ ಸ್ಪಂದಿಸಿದ ಸ್ಯಾಂಡಲ್‌ವುಡ್ ನಟ ವಿನೋದ್ ರಾಜ್ ಅವರು, ಸ್ವತಃ ಕಣಕ್ಕಿಳಿದು ರಸ್ತೆ ದುರಸ್ತಿ ಕಾರ್ಯ ಕೈಗೊಳ್ಳುವ ಮೂಲಕ ಮಾದರಿಯಾಗಿದ್ದಾರೆ. ವಾಹನ ಸವಾರರ ಜೀವ ಹಾಗೂ ಸುರಕ್ಷತೆಯ ದೃಷ್ಟಿಯಿಂದ ಮುಂದಾದ ನಟ ವಿನೋದ್ ರಾಜ್, ರಸ್ತೆಯ ಗುಂಡಿಗಳಿಗೆ ಸಿಮೆಂಟ್ ಮಿಶ್ರಿತ ಕಾಂಕ್ರೀಟ್ ಹಾಕಿ ಮುಚ್ಚುವ ಕೆಲಸವನ್ನು ತಾವೇ ನಿಂತು ನೆರವೇರಿಸಿದ್ದಾರೆ. ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಸಂಬಂಧಪಟ್ಟ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಮಾಡಬೇಕಾಗಿದ್ದ ಕೆಲಸವನ್ನು, ಒಬ್ಬ ಜವಾಬ್ದಾರಿಯುತ ನಾಗರಿಕನಾಗಿ ನಟ ವಿನೋದ್ ರಾಜ್ ಅವರೇ ಮುಂಚೂಣಿಯಲ್ಲಿದ್ದು ಪೂರ್ಣಗೊಳಿಸಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Loading...
Unable to load recommendations.
Follow Us
