AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಶಾ ಕಾರ್ಯಕರ್ತೆಯರ ಪ್ರತಿಭಟನೆಗೆ ವಿನೋದ್ ರಾಜ್ ಸಾಥ್; ದಿನಸಿ ಪದಾರ್ಥ ವಿತರಣೆ

ಆಶಾ ಕಾರ್ಯಕರ್ತೆಯರ ಪ್ರತಿಭಟನೆಗೆ ವಿನೋದ್ ರಾಜ್ ಸಾಥ್; ದಿನಸಿ ಪದಾರ್ಥ ವಿತರಣೆ

ಮದನ್​ ಕುಮಾರ್​
|

Updated on: Nov 25, 2026 | 9:00 PM

Share

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ನಟ ವಿನೋದ್ ರಾಜ್ ಬೆಂಬಲ ಸೂಚಿಸಿದ್ದಾರೆ. ಪ್ರತಿಭಟನಾ ಸ್ಥಳಕ್ಕೆ ಖುದ್ದು ಭೇಟಿ ನೀಡಿದ ಅವರು, ಕಾರ್ಯಕರ್ತೆಯರಿಗಾಗಿ 10 ಚೀಲ ಅಕ್ಕಿ ಸೇರಿದಂತೆ ಅಗತ್ಯ ದಿನಸಿ ಪದಾರ್ಥಗಳನ್ನು ತಂದುಕೊಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಗೌರವಧನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ನಟ ವಿನೋದ್ ರಾಜ್ ಬೆಂಬಲ ಸೂಚಿಸಿದ್ದಾರೆ. ಪ್ರತಿಭಟನಾ ಸ್ಥಳಕ್ಕೆ ಖುದ್ದು ಭೇಟಿ ನೀಡಿದ ಅವರು, ಕಾರ್ಯಕರ್ತೆಯರಿಗಾಗಿ 10 ಚೀಲ ಅಕ್ಕಿ ಸೇರಿದಂತೆ ಅಗತ್ಯ ದಿನಸಿ ಪದಾರ್ಥಗಳನ್ನು ತಂದುಕೊಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ವಿನೋದ್ ರಾಜ್, ಆಶಾ ಕಾರ್ಯಕರ್ತೆಯರ ನಿಸ್ವಾರ್ಥ ಸೇವೆಯನ್ನು ಸ್ಮರಿಸಿ ಭಾವುಕರಾದರು. ‘ಕೊರೊನಾ ಮಹಾಮಾರಿಯ ಕಷ್ಟದ ಸಮಯದಲ್ಲಿ ನಮಗೆಲ್ಲರಿಗೂ ಧೈರ್ಯ ತುಂಬಿದವರು ಇವರು. ನಮ್ಮ ತಾಯಿಯವರ (ಲೀಲಾವತಿ) ಆರೋಗ್ಯ ಕ್ಷೀಣಿಸಿದಾಗಲೂ ಮನೆಗೆ ಬಂದು ಬಹಳ ಪ್ರೀತಿಯಿಂದ ಸೇವೆ ಮಾಡಿದ್ದಾರೆ. ನಮ್ಮ ತಾಯಿಯ ಪರವಾಗಿ ನಾನು ಆಶಾ ಕಾರ್ಯಕರ್ತೆಯರಿಗೆ ಎಂದಿಗೂ ಚಿರಋಣಿಯಾಗಿರುತ್ತೇನೆ. ಆಶಾ ಕಾರ್ಯಕರ್ತೆಯರು ನಿಷ್ಕಲ್ಮಷ ಸೇವೆ ಮಾಡುತ್ತಾರೆ. ಆದರೆ, ಇಂದು ಅವರಿಗೆ ನೋವಾಗಿದೆ. ಸರ್ಕಾರ ಇವರ ಬೇಡಿಕೆಗಳಿಗೆ ಸ್ಪಂದಿಸಬೇಕು’ ಎಂದರು. ರಮ್ಯಾ, ಅವಿನಾಶ್, ಮಾಳವಿಕಾ, ತಾರಾ ಸೇರಿದಂತೆ ಹಲವು ಸೆಲೆಬ್ರಿಟಿಗಳು ಕೂಡ ಈ ಪ್ರತಿಭಟನೆಗೆ ಬೆಂಬಲ ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More