‘ವರ್ಷ 70 ಆದರೂ ನಾನು ತಾಯಿ ರೀತಿ ಕಾಣಲ್ಲ’; ಅನು ಪ್ರಭಾಕರ್

Updated on: Nov 12, 2026 | 4:40 PM

ಅನು ಪ್ರಭಾಕರ್ ಅವರಿಗೆ 45 ವರ್ಷಗಳ ಮೇಲಾಗಿದೆ. ಆದರೂ ಸಖತ್ ಯಂಗ್ ಆಗಿ ಕಾಣಿಸುತ್ತಾರೆ. ಈಗ ಅವರು ತಮ್ಮ ವಯಸ್ಸಿನ ಬಗ್ಗೆ ಮಾತನಾಡಿದ್ದಾರೆ. 70 ವರ್ಷಗಳು ಕಳೆದರೂ ನನಗೆ ವಯಸ್ಸಾದಂತೆ ಕಾಣೋದಿಲ್ಲ ಎಂದು ಅವರು ಹೇಳಿದ್ದಾರೆ. ಅವರು ಯಾಕೆ ಹೀಗೆ ಹೇಳಿದರು ಎಂಬ ಬಗ್ಗೆ ಇಲ್ಲಿದೆ ವಿವರ.

ಜೀ ಕನ್ನಡದಲ್ಲಿ ನವೆಂಬರ್ 16ರಿಂದ ಪ್ರಸಾರ ಆಗಲಿರುವ ‘ಗೌರಿಪುತ್ರ’ ಸೀರಿಯಲ್​ನಲ್ಲಿ ಅನು ಪ್ರಭಾಕರ್ ತಾಯಿ ಪಾತ್ರ ಮಾಡುತ್ತಿದ್ದಾರೆ. ಅವರು ತಾಯಿಯಂತೆ ಕಾಣೋದಿಲ್ಲ ಎಂಬ ಅಭಿಪ್ರಾಯ ವ್ಯಕ್ತವಾಯಿತು. ಈ ಬಗ್ಗೆ ಮಾತನಡಿದ ಅನು ಪ್ರಭಾಕರ್ ಅವರು, ‘ನನಗೆ 70 ವರ್ಷ ದಾಟಿದರೂ ತಾಯಿಯಂತೆ ಕಾಣೋದಿಲ್ಲ’ ಎಂದು ಅನು ಪ್ರಭಾಕರ್ ಹೇಳಿದ್ದಾರೆ. ಅನು ಪ್ರಭಾಕರ್ ಫಿಟ್ನೆಸ್​​​ಗೆ ಪ್ರಾಮುಖ್ಯತೆ ಕೊಡುತ್ತಾರೆ. ಯೋಗ ಮಾಡುತ್ತಾರೆ. ಇದು ಅವರ ಬ್ಯೂಟಿ ಸೀಕ್ರೆಟ್.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More