‘ನನಗೂ ಅಶ್ಲೀಲ ಮೆಸೇಜ್ಗಳು ಬರುತ್ತವೆ’: ಕಹಿ ಸತ್ಯ ವಿವರಿಸಿದ ನಟಿ ಅಪೂರ್ವಾ
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಜೈಲುಪಾಲಾಗಿರುವುದು ಅಭಿಮಾನಿಗಳಿಗೆ ಬೇಸರ ತಂದಿದೆ. ಈ ಪ್ರಕರಣದ ಬಗ್ಗೆ ಅನೇಕ ಸೆಲೆಬ್ರಿಟಿಗಳು ಈಗಾಗಲೇ ತಮ್ಮ ಅನಿಸಿಕೆ ತಿಳಿಸಿದ್ದಾರೆ. ನಟಿ ಅಪೂರ್ವಾ ಅವರು ಕೂಡ ಈ ಕುರಿತು ಮಾತನಾಡಿದ್ದಾರೆ. ರೇಣುಕಾ ಸ್ವಾಮಿ ಅಶ್ಲೀಲ ಸಂದೇಶ ಕಳಿಸಿದ್ದರಿಂದ ಇಷ್ಟೆಲ್ಲ ದುರಂತಕ್ಕೆ ಕಾರಣ ಆಯಿತು. ಆತನ ಕೃತ್ಯವನ್ನು ಎಲ್ಲರೂ ಖಂಡಿಸುತ್ತಿದ್ದಾರೆ.
ಸೋಶಿಯಲ್ ಮೀಡಿಯಾದಲ್ಲಿ ಮಹಿಳೆಯರಿಗೆ ಕಿಡಿಗೇಡಿಗಳು ಅಶ್ಲೀಲ ಸಂದೇಶ ಕಳಿಸುತ್ತಾರೆ. ಇದರಿಂದ ಮಹಿಳೆಯರಿಗೆ ಆಗುವ ಕಿರಿಕಿರಿ ಅಷ್ಟಿಷ್ಟಲ್ಲ. ನಟಿ ಪವಿತ್ರಾ ಗೌಡಗೆ ರೇಣುಕಾ ಸ್ವಾಮಿ ಅಶ್ಲೀಲ ಸಂದೇಶ ಕಳಿಸಿದ್ದ ಎಂಬ ಆರೋಪ ಇದೆ. ಅದೇ ಕಾರಣಕ್ಕಾಗಿ ಆತನನ್ನು ಬೆಂಗಳೂರಿಗೆ ಕರೆಸಿಕೊಂಡು ಚಿತ್ರಹಿಂಸೆ ನೀಡಿ ಹತ್ಯೆ ಮಾಡಿದ ಆರೋಪದಲ್ಲಿ ದರ್ಶನ್, ಪವಿತ್ರಾ ಗೌಡ ಮುಂತಾದವರ ಬಂಧನ ಆಯಿತು. ಈ ಬಗ್ಗೆ ನಟಿ ಅಪೂರ್ವಾ ಅವರು ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ. ‘ಮಾಡಿರುವ ತಪ್ಪಿಗೆ ಕಾನೂನಿನ ಪ್ರಕಾರ ಶಿಕ್ಷೆ ಆಗುತ್ತದೆ. ನನಗೆ ಸೋಶಿಯಲ್ ಮೀಡಿಯಾ ಹಾಗೂ ವಾಟ್ಸಪ್ನಲ್ಲಿ ಅನೇಕ ಅಶ್ಲೀಲ ಸಂದೇಶ ಬರುತ್ತದೆ. ಅಂಥವರನ್ನು ನಾನು ಬ್ಲಾಕ್ ಮಾಡಿ ಬಿಸಾಕುತ್ತೇನೆ. ಹೀರೋಯಿನ್ಗೆ ಮಾತ್ರವಲ್ಲ, ಸಾಮಾನ್ಯ ಹುಡುಗಿಯರಿಗೂ ಕೆಟ್ಟ ಮೆಸೇಜ್ಗಳು ಬರುತ್ತವೆ. ಅಂಥ ಹುಡುಗಿಯರು ಬೇಗ ಅಪ್ಸೆಟ್ ಆಗುತ್ತಾರೆ. ಎಲ್ಲರ ಮನಸ್ಥಿತಿ ಒಂದೇ ರೀತಿ ಇರುವುದಿಲ್ಲ’ ಎಂದು ಅಪೂರ್ವಾ ಅವರು ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.