‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ

Updated on: May 01, 2026 | 6:23 PM

Vasudeva Kutumba serial: ಬಿಗ್​​ಬಾಸ್ ಮಾಜಿ ಸ್ಪರ್ಧಿ, ನಟಿ ಹಂಸ ‘ವಸುದೇವ ಕುಟುಂಬ’ ಧಾರಾವಾಹಿಯಲ್ಲಿ ನಟಿಸುತ್ತಿದ್ದು, ಇದೀಗ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದಿದ್ದಾರೆ. ಧಾರಾವಾಹಿಯ ನಿರ್ಮಾಪಕರು ತಮ್ಮ ಸಂಭಾವನೆ ಕೊಡದೆ ಸತಾಯಿಸಿದ್ದು, ಯೂನಿಟ್ ಅನ್ನು ಸಹ ಸರಿಯಾಗಿ ನೋಡಿಕೊಂಡಿಲ್ಲ ಎಂದು ಹಂಸ ವಾಗ್ದಾಳಿ ನಡೆಸಿದ್ದಾರೆ. ಇಂದು (ಮೇ 1) ಧಾರಾವಾಹಿ ನಿರ್ಮಾಪಕರು ಇದ್ದ ಸ್ಥಳಕ್ಕೇ ಹೋಗಿ ನಿರ್ಮಾಪಕರನ್ನು ತರಾಟೆಗೆ ತೆಗೆದುಕೊಂಡ ನಟಿ, ಬಳಿಕ ಟಿವಿ9 ಜೊತೆಗೆ ಮಾತನಾಡಿದ್ದಾರೆ.

ಬಿಗ್​​ಬಾಸ್ (Bigg Boss) ಮಾಜಿ ಸ್ಪರ್ಧಿ, ನಟಿ ಹಂಸ ‘ವಸುದೇವ ಕುಟುಂಬ’ ಧಾರಾವಾಹಿಯಲ್ಲಿ ನಟಿಸುತ್ತಿದ್ದು, ಇದೀಗ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದಿದ್ದಾರೆ. ಧಾರಾವಾಹಿಯ ನಿರ್ಮಾಪಕರು ತಮ್ಮ ಸಂಭಾವನೆ ಕೊಡದೆ ಸತಾಯಿಸಿದ್ದು, ಯೂನಿಟ್ ಅನ್ನು ಸಹ ಸರಿಯಾಗಿ ನೋಡಿಕೊಂಡಿಲ್ಲ ಎಂದು ಹಂಸ ವಾಗ್ದಾಳಿ ನಡೆಸಿದ್ದಾರೆ. ಇಂದು (ಮೇ 1) ಧಾರಾವಾಹಿ ನಿರ್ಮಾಪಕರು ಇದ್ದ ಸ್ಥಳಕ್ಕೇ ಹೋಗಿ ನಿರ್ಮಾಪಕರನ್ನು ತರಾಟೆಗೆ ತೆಗೆದುಕೊಂಡ ನಟಿ, ಬಳಿಕ ಟಿವಿ9 ಜೊತೆಗೆ ಮಾತನಾಡಿ, ನಿರ್ಮಾಪಕರ ವಿರುದ್ಧ ಬೆಂಕಿ ಉಗುಳಿದ್ದಾರೆ. ‘ನನ್ನ ಹಣ ಹೋದರೆ ಹೋಗಲಿ, ಈ ವ್ಯಕ್ತಿಯ ಮುಖವಾಡ ಬಯಲು ಮಾಡದೇ ಬಿಡೆನು’ ಎಂದು ಅಬ್ಬರಿಸಿದ್ದಾರೆ ನಟಿ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Follow Us
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More