ಕಳೆದು ಹೋದ ಮೊಬೈಲ್ ಕೊರಗಜ್ಜನ ಕೃಪೆಯಿಂದ ಸಿಕ್ತು: ನಟಿ ಇಳಾ ವಿಟ್ಲಾ

Updated on: May 04, 2025 | 8:18 AM

ಖ್ಯಾತ ನಟಿ ಇಳಾ ವಿಟ್ಲಾ ಅವರು ಬೆಂಗಳೂರಿನಿಂದ ಮಂಗಳೂರಿಗೆ ತೆರಳಿ ಕೊರಗಜ್ಜನಿಗೆ ಪೂಜೆ ಸಲ್ಲಿಸಿದ್ದಾರೆ. ಕಳೆದುಹೋಗಿದ್ದ ಮೊಬೈಲ್ ಸಿಕ್ಕಿದ್ದಕ್ಕೆ ಅವರು ಹರಕೆ ತೀರಿಸಿದ್ದಾರೆ. ಬಳಿಕ ಮಾತನಾಡಿದ ಅವರು ಕೊರಗಜ್ಜನ ಮೇಲಿನ ತಮ್ಮ ಭಕ್ತಿ ಮತ್ತು ನಂಬಿಕೆಯ ಬಗ್ಗೆ ವಿವರಿಸಿದರು. ಕೊರಗಜ್ಜನ ಪವಾಡ ಯಾವ ರೀತಿ ಆಗಿದೆ ಎಂಬುದನ್ನು ತಿಳಿಸಿದರು.

ಕನ್ನಡ ಕಿರುತೆರೆ ಹಾಗೂ ಸಿನಿಮಾದಲ್ಲಿ ಖ್ಯಾತಿ ಗಳಿಸಿರುವ ನಟಿ ಇಳಾ ವಿಟ್ಲಾ (Ila Vitla) ಅವರು ಮಂಗಳೂರಿಗೆ ಬಂದು ಕೊರಗಜ್ಜನ ದೇವಸ್ಥಾನಕ್ಕೆ (Koragajja Temple) ಭೇಟಿ ನೀಡಿದ್ದಾರೆ. ಅಲ್ಲಿ ಅವರು ಪೂಜೆ ಸಲ್ಲಿಸಿದ್ದಾರೆ. ಕಳೆದುಹೋಗಿದ್ದ ಹೊಸ ಮೊಬೈಲ್ ಸಿಕ್ಕಿದ್ದಕ್ಕೆ ಇಳಾ ವಿಟ್ಲಾ ಅವರು ಈಗ ಹರಕೆ ತೀರಿಸಿದ್ದಾರೆ. ಬಳಿಕ ಮಾತನಾಡಿದ ಅವರು, ಕೊರಗಜ್ಜನ ಮೇಲೆ ತಮಗೆ ಇರುವ ಭಕ್ತಿ ಹಾಗೂ ನಂಬಿಕೆಯ ಬಗ್ಗೆ ವಿವರಿಸಿದರು. ತಮ್ಮ ಬದುಕಿನಲ್ಲಿ ಕೊರಗಜ್ಜನ (Koragajja) ಪವಾಡ ಯಾವ ರೀತಿ ನಡೆದಿದೆ ಎಂಬುದನ್ನು ಅವರು ತಿಳಿಸಿದರು. ಆ ಸಂದರ್ಭದ ವಿಡಿಯೋ ಇಲ್ಲಿದೆ..

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More