‘ಕಣ್ಣಿನಲ್ಲೇ ಕಥೆ ಹೇಳುವ ಕಲಾವಿದ’: ಫಾಲ್ಕೆ ಗೌರವ ಪಡೆದ ಅನಂತ್ ನಾಗ್ ಬಗ್ಗೆ ಜಯಮಾಲಾ ಮಾತು

Edited By:

Updated on: Sep 17, 2026 | 5:27 PM

ಅನಂತ್ ನಾಗ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ ಆಗಿದೆ. ಇದು ಕನ್ನಡ ಚಿತ್ರರಂಗಕ್ಕೆ ಸಂಭ್ರಮದ ಸಂಗತಿ. ಈ ಬಗ್ಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷೆ ಜಯಮಾಲಾ ಅವರು ಟಿವಿ9 ಜತೆ ಮಾತನಾಡಿದ್ದಾರೆ. ಅನಂತ್ ನಾಗ್ ಅವರ ಪ್ರತಿಭೆಯನ್ನು ಜಯಮಾಲಾ ಕೊಂಡಾಡಿದ್ದಾರೆ.

ಹಿರಿಯ ನಟ ಅನಂತ್ ನಾಗ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ ಆಗಿದೆ. ಇದು ಕನ್ನಡ ಚಿತ್ರರಂಗಕ್ಕೆ ಸಂಭ್ರಮದ ಸಂಗತಿ ಆಗಿದೆ. ಈ ಬಗ್ಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷೆ, ಹಿರಿಯ ನಟಿ ಜಯಮಾಲಾ ಅವರು ಟಿವಿ9 ಜೊತೆ ಮಾತನಾಡಿದ್ದಾರೆ. ಅನಂತ್ ನಾಗ್ ಅವರ ಪ್ರತಿಭೆಯನ್ನು ಅವರು ಕೊಂಡಾಡಿದ್ದಾರೆ. ‘ಅನಂತ್ ನಾಗ್ ಅವರು ಅದ್ಭುತವಾದ ಕಲಾವಿದರು. ಅವರು ಮಾತನಾಡುವುದೇ ಬೇಡ. ಅವರು ಕಣ್ಣಿನಲ್ಲೇ ಇಡೀ ಕಥೆ ಹೇಳುವ ನಟ. ಅವರಿಗೆ ಈ ಪ್ರಶಸ್ತಿ ಬಂದಿರುವುದು ನಮಗೆಲ್ಲ ಸಂತೋಷ. ಅವರಂಥ ಕಲಾವಿದರನ್ನು ಹೊಂದಿರುವುದು ನಮ್ಮ ಪುಣ್ಯ’ ಎಂದು ಜಯಮಾಲಾ ಅವರು ಹೇಳಿದ್ದಾರೆ. ಮೊದಲು ಚೆನ್ನೈನಲ್ಲಿ ಕೆಲಸ ಮಾಡುತ್ತಿದ್ದ ಕನ್ನಡ ಚಿತ್ರರಂಗವನ್ನು ಬೆಂಗಳೂರಿಗೆ ಸ್ಥಳಾಂತರಿಸಲು ಅನಂತ್ ನಾಗ್ ಮತ್ತು ಶಂಕರ್ ನಾಗ್ ಅವರು ಹೇಗೆ ಕಾರಣಕರ್ತರಾದರು ಎಂಬುದನ್ನು ಕೂಡ ಜಯಮಾಲಾ ಅವರು ವಿವರಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮಾಲತೇಶ ಜಗ್ಗೀನ್

ಮಾಲತೇಶ ಜಗ್ಗೀನ್. Tv9 ಕನ್ನಡ ವಾಹಿನಿ ಫಿಲಂ ಬ್ಯೂರೋ ಮುಖ್ಯಸ್ಥನಾಗಿ ಕೆಲಸ ಮಾಡ್ತಿದ್ದಾರೆ. ಮಾಲತೇಶ ವಿಜಯನಗರ ಜಿಲ್ಲೆ ಹೂವಿನ ಹಡಗಲಿ ತಾಲ್ಲೂಕು ಹೊಳಲು ಗ್ರಾಮದವರು. ಕಳೆದ 15 ವರ್ಷಗಳಲ್ಲಿ ಮಾಧ್ಯಮ ಲೋಕದ ವಿವಿಧ ವಿಭಾಗಗಳಲ್ಲಿ ವರದಿಗಾರಿಕೆ ಮಾಡಿದ ಅನುಭವ ಇದೆ. ಸಿನಿಮಾ ವಿಭಾಗದ ಜೊತೆ ರಾಜಕೀಯ, ಮೆಟ್ರೋ, ಕ್ರೈಂ ವಿಭಾಗದಲ್ಲೂ ಕೆಲವು ಸನ್ನಿವೇಶಗಳಲ್ಲಿ ವರದಿಗಾರಿಕೆ ಮಾಡಿದ್ದಾರೆ. ಹಾವೇರಿಯ ಕೆಎಫ್ ಚಾನಲ್ , ನಂತರ ಬೆಂಗಳೂರಿನ ಸಮಯ ನ್ಯೂಸ್, ಜನಶ್ರಿ ನ್ಯೂಸ್, ಪಬ್ಲಿಕ್ ಟಿವಿ ಸೇರಿದಂತೆ ವಿವಿಧ ವಾಹಿನಿಗಳಲ್ಲಿ ಕೆಲಸ ಮಾಡಿದ ಅನುಭವ ಇದೆ. Tv9kannada ನ್ಯೂಸ್ ಚಾನಲ್ ನಲ್ಲಿ ಕಳೆದ 10 ವರ್ಷಗಳಿಂದ ಇದ್ದಾರೆ. ಕಲೆ, ಸಾಹಿತ್ಯ, ಸಿನಿಮಾ, ಕ್ರಿಡೆ ಆಸಕ್ತಿ ವಿಷಯಗಳು.

Read More