ಮೈಸೂರು ಅರಮನೆಗೆ ಭೇಟಿ ನೀಡಿದ ನಟಿ ಕಾಜಲ್ ಅಗರ್ವಾಲ್; ಗತವೈಭವ ಕಂಡು ಬೆರಗು

Edited By:

Updated on: Oct 06, 2026 | 10:22 AM

ಸಾಂಸ್ಕೃತಿಕ ನಗರಿ ಮೈಸೂರಿನ ವಿಶ್ವವಿಖ್ಯಾತ ಅರಮನೆಗೆ ಬಹುಭಾಷಾ ನಟಿ ಕಾಜಲ್ ಅಗರ್ವಾಲ್ ಭೇಟಿ ನೀಡಿ ರಾಜರ ಕಾಲದ ಗತವೈಭವವನ್ನು ವೀಕ್ಷಿಸಿದ್ದಾರೆ. ಅರಮನೆಯ ಭವ್ಯ ವಾಸ್ತುಶಿಲ್ಪ ಹಾಗೂ ಕಲಾಕೃತಿಗಳನ್ನು ಕಂಡು ಬೆರಗಾದ ನಟಿ, ಮೈಸೂರು ಸಂಸ್ಥಾನದ ಇತಿಹಾಸ ಮತ್ತು ಹಿರಿಮೆಯ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು ಸಂತಸ ವ್ಯಕ್ತಪಡಿಸಿದ್ದಾರೆ.

ದಸರಾ ಆಗಮನಕ್ಕೆ ಇನ್ನು ಕೆಲವೇ ದಿನ ಬಾಕಿ ಇದ್ದು, ಮೈಸೂರು ಅರಮನೆಯಲ್ಲಿ ಭರದ ಸಿದ್ಧತೆ ನಡೆಯುತ್ತಿದೆ. ಈ ವೇಳೆ ನಟಿ ಕಾಜಲ್ ಅಗರ್ವಾಲ್ ಅವರಿಗೆ ಮೈಸೂರು ಅರಮನೆಗೆ ಭೇಟಿ ನೀಡಿದ್ದಾರೆ. ಅವರನ್ನು ಆತ್ಮೀಯವಾಗಿ ಸ್ವಾಗತಿಸಿ, ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು. ಅರಮನೆಯ ಇತಿಹಾಸ ಮತ್ತು ಮಹತ್ವವನ್ನು ವಿವರಿಸಿದ ಅಧಿಕಾರಿಗಳಿಗೆ ನಟಿ ಧನ್ಯವಾದ ಅರ್ಪಿಸಿದರು. ಅರಮನೆಯ ವೈಭವಕ್ಕೆ ಮಾರುಹೋಗಿದ್ದಾರೆ. ಕಾಜಲ್ ಅಗರ್ವಾಲ್ ಅರಮನೆಗೆ ಭೇಟಿ ನೀಡಿರುವ ವಿಷಯ ತಿಳಿಯುತ್ತಿದ್ದಂತೆ, ಅವರನ್ನು ನೋಡಲು ಪ್ರವಾಸಿಗರು ಹಾಗೂ ಅಭಿಮಾನಿಗಳು ಮುಗಿಬಿದ್ದರು. ನೆಚ್ಚಿನ ನಟಿಯ ಜೊತೆ ಫೋಟೋ ಹಾಗೂ ಸೆಲ್ಫಿ ಕ್ಲಿಕ್ಕಿಸಿಕೊಂಡು ಅಭಿಮಾನಿಗಳು ಸಂಭ್ರಮಿಸಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Oct 06, 2026 09:57 AM
Loading...
Unable to load recommendations.
Follow Us
ರಾಮ್​, ಮೈಸೂರು

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More