AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ ನಟಿ ರಚಿತಾ ರಾಮ್; ವಿಡಿಯೋ ನೋಡಿ

ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ ನಟಿ ರಚಿತಾ ರಾಮ್; ವಿಡಿಯೋ ನೋಡಿ

ಅಶೋಕ್​ ಪೂಜಾರಿ
| Edited By: |

Updated on: May 17, 2026 | 12:12 PM

Share

ನಟಿ ರಚಿತಾ ರಾಮ್ ಅವರು ಕೊರಗಜ್ಜ ದೈವದ ಕೋಲ ಸೇವೆಯಲ್ಲಿ ಭಾಗಿಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬೆಂಜನಪದವಿನ ಕೊರಗಜ್ಜ ಸನ್ನಿಧಿಯಲ್ಲಿ ರಚಿತಾ ರಾಮ್ ಕೋಲ ಸೇವೆ ನೀಡಿದ್ದಾರೆ. ಕುಟುಂಬ ಸಮೇತರಾಗಿ ಆಗಮಿಸಿ ಕೋಲ ಸೇವೆಯಲ್ಲಿ ಭಾಗಿಯಾದ ಅವರ ವಿಡಿಯೋ ಲಭ್ಯವಾಗಿದೆ.

ನಟಿ ರಚಿತಾ ರಾಮ್ (Rachita Ram) ಅವರು ಚಿತ್ರರಂಗಕ್ಕೆ ಕಾಲಿಟ್ಟು 14 ವರ್ಷಗಳು ಕಳೆದಿವೆ. ಈಗಲೂ ಅವರಿಗೆ ಅಷ್ಟೇ ಬೇಡಿಕೆ ಇದೆ. ಕನ್ನಡ ಮಾತ್ರವಲ್ಲದೇ ಪರಭಾಷೆಯ ಚಿತ್ರರಂಗದಿಂದಲೂ ಅವರಿಗೆ ಅವಕಾಶಗಳು ಬರುತ್ತಿವೆ. ರಚಿತಾ ಅವರು ದೈವ ಭಕ್ತೆ ಕೂಡ ಹೌದು. ಈಗ ಅವರು ಕೊರಗಜ್ಜ ದೈವದ ಕೋಲ ಸೇವೆಯಲ್ಲಿ ಭಾಗಿಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬೆಂಜನಪದವಿನ ಕೊರಗಜ್ಜ (Koragajja) ಸನ್ನಿಧಿಯಲ್ಲಿ ರಚಿತಾ ರಾಮ್ ಅವರು ಕೋಲ ಸೇವೆ ನೀಡಿದ್ದಾರೆ. ಕುಟುಂಬ ಸಮೇತರಾಗಿ ಆಗಮಿಸಿ ಕೋಲ ಸೇವೆಯಲ್ಲಿ ಭಾಗಿಯಾದ ರಚಿತಾ ರಾಮ್ ಅವರ ವಿಡಿಯೋ ಲಭ್ಯವಾಗಿದೆ. ಧ್ರುವ ಸರ್ಜಾ ಜೊತೆ ‘ಕ್ರಿಮಿನಲ್’ ಹಾಗೂ ಸತೀಶ್ ನೀನಾಸಂ ಜೊತೆ ‘ಅಯೋಗ್ಯ 2’ ಸಿನಿಮಾಗಳಲ್ಲಿ ರಚಿತಾ ರಾಮ್ ಅವರು ಬ್ಯುಸಿ ಆಗಿದ್ದಾರೆ. ಶೀಘ್ರದಲ್ಲೇ ಅವರ ಹೊಸ ಸಿನಿಮಾಗಳು ಘೋಷಣೆ ಆಗಲಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಅಶೋಕ್​ ಪೂಜಾರಿ
ಅಶೋಕ್​ ಪೂಜಾರಿ

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸ್ಥಳೀಯ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಖಾಸಗಿ ಸುದ್ದಿ ವಾಹಿನಿಯಲ್ಲಿ ಉಡುಪಿ ಜಿಲ್ಲಾ ವರದಿಗಾರರಾಗಿ ಕೆಲಕಾಲ ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ ನಂತರ ಟಿವಿ9 ಸುದ್ದಿ ವಾಹಿನಿಯಲ್ಲಿ ಉತ್ತರ ಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ indiatelevision.com 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More