AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ಪತ್ನಿ ವಿಜಯಲಕ್ಷ್ಮೀ

ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ಪತ್ನಿ ವಿಜಯಲಕ್ಷ್ಮೀ

ಮದನ್​ ಕುಮಾರ್​
|

Updated on: Jul 21, 2026 | 8:23 PM

Share

ರಕ್ಷಿತಾ ಪ್ರೇಮ್ ಮತ್ತು ವಿಜಯಲಕ್ಷ್ಮೀ 2 ಕಾರುಗಳಲ್ಲಿ ಪ್ರತ್ಯೇಕವಾಗಿ ಜೈಲಿಗೆ ಬಂದಿದ್ದಾರೆ. ದರ್ಶನ್ ನೋಡಲು ರಕ್ಷಿತಾ ಜೈಲಿಗೆ ಬಂದಿರುವುದು ಇದು 2ನೇ ಬಾರಿ. ದರ್ಶನ್-ರಕ್ಷಿತಾ ನಡುವೆ ಅನೇಕ ವರ್ಷಗಳ ಸ್ನೇಹ ಇದೆ. ಹಲವು ಸಿನಿಮಾಗಳಲ್ಲಿ ಅವರು ಜೋಡಿಯಾಗಿ ಅಭಿನಯಿಸಿದ್ದರು. ಈಗ ಜೈಲಿನಲ್ಲಿ ಭೇಟಿಯಾಗಿದ್ದಾರೆ.

ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿ ಕಂಬಿ ಎಣಿಸುತ್ತಿದ್ದಾರೆ. ಜಾಮೀನು ಪಡೆಯಲು ಅವರು ಮಾಡಿದ ಎಲ್ಲ ಪ್ರಯತ್ನಗಳೂ ವ್ಯರ್ಥ ಆಗಿವೆ. ಅವರನ್ನು ನೋಡಲು ಆಪ್ತರು ಮತ್ತು ಕುಟುಂಬದವರು ಪರಪ್ಪನ ಅಗ್ರಹಾರ ಜೈಲಿಗೆ ಆಗಮಿಸುತ್ತಿದ್ದಾರೆ. ಮಂಗಳವಾರ (ಜುಲೈ 21) ನಟಿ ರಕ್ಷಿತಾ ಪ್ರೇಮ್ ಮತ್ತು ಪತ್ನಿ ವಿಜಯಲಕ್ಷ್ಮಿ ಅವರು ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿಗೆ ಭೇಟಿ ನೀಡಿ, ದರ್ಶನ್ (Darshan) ಜೊತೆ ಮಾತನಾಡಿದ್ದಾರೆ. ರಕ್ಷಿತಾ ಪ್ರೇಮ್ ಮತ್ತು ವಿಜಯಲಕ್ಷ್ಮೀ ಅವರು 2 ಕಾರುಗಳಲ್ಲಿ ಪ್ರತ್ಯೇಕವಾಗಿ ಜೈಲಿಗೆ ಬಂದಿದ್ದಾರೆ. ದರ್ಶನ್ ನೋಡಲು ರಕ್ಷಿತಾ ಅವರು ಜೈಲಿಗೆ ಬಂದಿರುವುದು ಇದು ಎರಡನೇ ಬಾರಿ. ದರ್ಶನ್ ಮತ್ತು ರಕ್ಷಿತಾ ನಡುವೆ ಅನೇಕ ವರ್ಷಗಳ ಸ್ನೇಹ ಇದೆ. ಹಲವು ಸಿನಿಮಾಗಳಲ್ಲಿ ಅವರು ಜೊತೆಯಾಗಿ ಅಭಿನಯಿಸಿದ್ದರು. ಈಗ ಅವರು ಜೈಲಿನಲ್ಲಿ ಭೇಟಿಯಾಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us