ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ

Updated on: Jun 03, 2026 | 5:22 PM

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ಅವರ ಕುಟುಂಬದವರು ಮತ್ತು ಆಪ್ತರು ಈ ಕ್ಷಣಕ್ಕೆ ಸಾಕ್ಷಿ ಆಗಿದ್ದಾರೆ. ಮಾಜಿ ಸಂಸದೆ, ನಟಿ ರಮ್ಯಾ ದಿವ್ಯ ಸ್ಪಂದನಾ ಕೂಡ ಬಂದು ಪ್ರಮಾಣವಚನವನ್ನು ವೀಕ್ಷಿಸಿದ್ದಾರೆ. ಈ ವೇಳೆ ಅವರು ನೀಡಿದ ಪ್ರತಿಕ್ರಿಯೆ ಇಲ್ಲಿದೆ.

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅವರ ಆಪ್ತರು ಮತ್ತು ಕುಟುಂಬದವರು ಈ ಕ್ಷಣಕ್ಕೆ ಸಾಕ್ಷಿ ಆಗಿದ್ದಾರೆ. ಮಾಜಿ ಸಂಸದೆ, ನಟಿ ರಮ್ಯಾ ದಿವ್ಯ ಸ್ಪಂದನಾ ಕೂಡ ಬಂದು ಪ್ರಮಾಣವಚನ ಕಾರ್ಯಕ್ರಮವನ್ನು ವೀಕ್ಷಿಸಿದ್ದಾರೆ. ಈ ವೇಳೆ ಅವರು ಪ್ರತಿಕ್ರಿಯೆ ನೀಡಿದ್ದಾರೆ. ‘ಡಿಕೆ ಶಿವಕುಮಾರ್ ಅವರು ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ. ಅವರಿಗೆ ಇರುವ ಸಾಮರ್ಥ್ಯಕ್ಕೆ ಖಂಡಿತವಾಗಿಯೂ ಅವರು ದೊಡ್ಡ ಮಟ್ಟದ ಬದಲಾವಣೆ ಮಾಡುತ್ತಾರೆ. ಕರ್ನಾಟಕಕ್ಕೆ ಅವರಿಂದ ಅನುಕೂಲ ಆಗಲಿದೆ. ಮತ್ತೆ ರಾಜಕೀಯಕ್ಕೆ ಮರಳುವ ಆಲೋಚನೆ ನನಗಿಲ್ಲ. ಇಂದು ನಾನು ಕೇವಲ ಅವರಿಗೆ ಶುಭ ಹಾರೈಸಿ, ಸಂಭ್ರಮಿಸಲು ಬಂದಿದ್ದೇನೆ’ ಎಂದು ರಮ್ಯಾ (Ramya) ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More