ಕನ್ನಡ ಚಿತ್ರರಂಗದಲ್ಲಿ ನಟಿಯರ ನಡುವೆ ತಾರತಮ್ಯ: ಅಸಲಿ ವಿಚಾರ ತಿಳಿಸಿದ ಸಾಕ್ಷಿ ಮೇಘನಾ
ಲೈಂಗಿಕ ಕಿರುಕುಳ ಮಾತ್ರವಲ್ಲದೇ ನಟಿಯರಿಗೆ ತಾರತಮ್ಯ ಕೂಡ ಎದುರಾಗುತ್ತದೆ. ಆ ವಿಚಾರದ ಬಗ್ಗೆ ನಟಿ ಸಾಕ್ಷಿ ಮೇಘನಾ ಅವರು ತಮ್ಮ ಅನಿಸಿಕೆ ತಿಳಿಸಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ಆಗಬೇಕಾದ ಸುಧಾರಣೆಗಳು ಏನು ಎಂಬುದನ್ನು ಅವರು ವಿವರಿಸಿದ್ದಾರೆ. ‘ಈ ಬದಲಾವಣೆ ಆದರೆ ಮಾತ್ರ ನಾವು ಬೇರೆ ಚಿತ್ರರಂಗದ ಜೊತೆ ಸ್ಪರ್ಧೆ ಮಾಡಲು ಸಾಧ್ಯ’ ಎಂದು ಅವರು ಹೇಳಿದ್ದಾರೆ.
ಮಲಯಾಳಂ ಚಿತ್ರರಂಗದಲ್ಲಿ ಹೇಮಾ ಸಮಿತಿ ವರದಿಯಿಂದ ಸಂಚಲನ ಸೃಷ್ಟಿ ಆಗಿದೆ. ಅದೇ ರೀತಿ ಬೇರೆ ಭಾಷೆಯ ಚಿತ್ರರಂಗದಲ್ಲಿ ಕೂಡ ಮಹಿಳೆಯರ ಮೇಲೆ ಆಗುತ್ತಿರುವ ಕಿರುಕುಳದ ಬಗ್ಗೆ ಧ್ವನಿ ಎತ್ತಲಾಗುತ್ತಿದೆ. ಈ ಬಗ್ಗೆ ಕನ್ನಡ ಚಿತ್ರರಂಗದ ನಟಿ ಸಾಕ್ಷಿ ಮೇಘನಾ ಅವರು ಮಾತನಾಡಿದ್ದಾರೆ. ಸಿನಿಮಾ ಕ್ಷೇತ್ರದಲ್ಲಿ ಆಗುತ್ತಿರುವ ತಾರತಮ್ಯದ ಬಗ್ಗೆ ಕೂಡ ಅವರು ತಮ್ಮ ಅನಿಸಿಕೆ ತಿಳಿಸಿದ್ದಾರೆ. ಆ ವಿಡಿಯೋ ಇಲ್ಲಿದೆ..
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.