ವಿಧಾನಸೌಧದ ಎದುರು ಯೋಗ ಮಾಡಿದ ನಟಿ ಸಾನ್ಯಾ ಅಯ್ಯರ್

Updated on: Jun 21, 2025 | 9:39 AM

ಇಂದು ವಿಶ್ವ ಯೋಗ ದಿನ. ಎಲ್ಲ ಕಡೆಗಳಲ್ಲಿ ಯೋಗ ದಿನವನ್ನು ಆಚರಿಸಲಾಗುತ್ತಿದೆ. ಸಾನ್ಯಾ ಅಯ್ಯರ್ ಕೂಡ ಯೋಗ ದಿನಾಚರಣೆಯಲ್ಲಿ ಭಾಗಿ ಆದರು. ರಾಜ್ಯ ಸರ್ಕಾರದ ವತಿಯಿಂದ ಆಯೋಜನೆ ಆದ ಯೋಗ ದಿನದಲ್ಲಿ ಅವರು ಭಾಗಿ ಆದರು. ಈ ವೇಳೆ ವಿವಿಧ ಸಚಿವರು ಕೂಡ ಇದ್ದರು.

ಯೋಗ ದಿನಾಚರಣೆಯ (Yoga Day) ಅಂಗವಾಗಿ ಇಂದು (ಜೂನ್ 21) ಯೋಗ ಮಾಡಲಾಗಿದೆ. ವಿಧಾನಸೌಧದ ಎದುರು ಸರ್ಕಾರ ಯೋಗ ದಿನವನ್ನು ಆಚರಿಸಿತು. ಈ ವೇಳೆ ಅನೇಕ ಸಚಿವರು, ರಾಜಕಾರಣಿಗಳು ಹಾಗೂ ಸೆಲೆಬ್ರಿಟಿಗಳು ಭಾಗಿ ಆಗಿದ್ದರು. ನಟಿ ಸಾನ್ಯಾ ಅಯ್ಯರ್ ಕೂಡ ಯೋಗ ದಿನಾಚರಣೆಯಲ್ಲಿ ಭಾಗಿ ಆದರು. ಅವರು ಯೋಗ ಮಾಡಿದ್ದು ಗಮನ ಸೆಳೆಯಿತು. ಸಾನ್ಯಾ ಅಯ್ಯರ್ ಅವರು ಕಿರುತೆರೆ ಮೂಲಕ ಫೇಮಸ್ ಆದವರು. ಅವರಿಗೆ ಬಿಗ್ ಬಾಸ್ ಸಾಕಷ್ಟು ಜನಪ್ರಿಯತೆ ನೀಡಿತು. ಆ ಬಳಿಕ ‘ಗೌರಿ’ ಹೆಸರಿನ ಸಿನಿಮಾದಲ್ಲಿ ನಟಿಸಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More