Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
Shilpa Shetty: ಮಂಗಳೂರು ಮೂಲದ ಖ್ಯಾತ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಇಂದು ಕಟೀಲು ದುರ್ಗಾಪರಮೇಶ್ವರಿ ದೇವಾಲಯಕ್ಕೆ ಭೇಟಿ ನೀಡಿದ್ದರು. ದೇವಾಲಯಕ್ಕೆ ಆಗಮಿಸಿ ಭಕ್ತಿಯಿಂದ ಪೂಜೆ ಮಾಡಿಸಿದ ಶಿಲ್ಪಾ ಶೆಟ್ಟಿ, ದೇವಾಲಯದ ಅರ್ಚಕರು, ಆಡಳಿತ ಮಂಡಳಿಯೊಟ್ಟಿಗೆ ಮಾತನಾಡಿದರು. ಶಿಲ್ಪಾ ಶೆಟ್ಟಿ ಈ ಮೊದಲೂ ಸಹ ಕೆಲವು ಬಾರಿ ಕರಾವಳಿಯ ಪ್ರಮುಖ ದೇವಾಲಯಗಳಿಗೆ ಭೇಟಿ ನೀಡಿದ್ದಾರೆ.
ಕರ್ನಾಟಕ ಮೂಲದ ಬಾಲಿವುಡ್ ಬೆಡಗಿ ಶಿಲ್ಪಾ ಶೆಟ್ಟಿ ಇಂದು (ಫೆಬ್ರವರಿ 28) ಕಟೀಲು ದುರ್ಗಾಪರಮೇಶ್ವರಿ ದೇವಾಲಯಕ್ಕೆ ಆಗಮಿಸಿ ದೇವಿಯ ದರ್ಶನ ಪಡೆದಿದ್ದಾರೆ. ಭಂಟ ಕುಟುಂಬದ ಶಿಲ್ಪಾ ಶೆಟ್ಟಿ ಮೂಲತಃ ಮಂಗಳೂರಿನವರೇ, ಅವರು ಆಗಾಗ್ಗೆ ಮಂಗಳೂರು ಸೇರಿದಂತೆ ಕರಾವಳಿ ಭಾಗದ ದೇವಾಲಯಗಳಿಗೆ ಭೇಟಿ ನೀಡುತ್ತಿರುತ್ತಾರೆ. ತುಳು ಭಾಷೆಯನ್ನು ಸ್ಪಷ್ಟವಾಗಿ ಮಾತನಾಡಬಲ್ಲರು ಶಿಲ್ಪಾ ಶೆಟ್ಟಿ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Feb 28, 2025 12:42 PM